ತುಮಕೂರು: ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 250 ಮಂದಿ 2ನೇ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.

ವಿವಿಧ 17 ಕಂಪನಿಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದವು. 500ಕ್ಕೂ ಹೆಚ್ಚು ಪದವೀಧರರು ನೋಂದಣಿ ಮಾಡಿಕೊಂಡಿದ್ದು, ಮೊದಲನೆ ಹಂತದ ಸಂದರ್ಶನಕ್ಕೆ 400 ಜನ ದಾಖಲೆ ಹಿಡಿದು ಬಂದಿದ್ದರು. ಇದರಲ್ಲಿ 250 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 2, 3ನೇ ಹಂತದ ಸಂದರ್ಶನ ನೇರವಾಗಿ ಕಂಪನಿಗಳಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಒಂದು ಉದ್ಯೋಗ ಪಡೆಯಲು ಮೂರು ಸಂದರ್ಶನ ‘ದಾಟಿ’ ಮುಂದೆ ಹೋಗಬೇಕಾಗಿದೆ.

ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಉದ್ಯೋಗ ಆಯ್ಕೆ ಕುರಿತು ಸ್ಪಷ್ಟ ಚಿತ್ರಣ ಇರಬೇಕು. ಕೌಶಲ, ನೈಪುಣ್ಯತೆ ಹೊಂದಿರಬೇಕು. ಸಂದರ್ಶನಕ್ಕೆ ತೆರಳುವ ಮುನ್ನ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.

ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್, ಉದ್ಯೋಗ ಕೋಶದ ನಿರ್ದೇಶಕ ಪ್ರೊ.ಕೆ.ಜಿ.ಪರಶುರಾಮ, ಸಮರ್ಥನಂ ಅಂಗವಿಕಲರ ಸಂಸ್ಥೆಯ ಮುಖ್ಯ ಉದ್ಯೋಗ ನಿಯೋಜಕ ಕೆ.ಸತೀಶ್, ಬೆಂಗಳೂರು ಶಾಖೆಯ ಮುಖ್ಯಸ್ಥ ಎಸ್.ಸುಭಾಷ್ ಚಂದ್ರ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.