ಸೋಮವಾರ, ಆಗಸ್ಟ್ 8, 2022
22 °C

ತುಮಕೂರು: ಶನಿವಾರ 287 ಮಂದಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ ಶನಿವಾರ 289 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಕೋವಿಡ್ ಆಸ್ಪತ್ರೆ ಮತ್ತು ಕೊರೊನಾ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 196 ಮಂದಿ ಗುಣಮುಖರಾಗಿ ಮನೆಗಳಿಗೆ ತೆರಳಿದರು. ಅಲ್ಲದೆ ನಾಲ್ಕು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಪಾವಗಡ ತಾಲ್ಲೂಕು ವೀರಮ್ಮನಹಳ್ಳಿ 69 ವರ್ಷದ ಪುರುಷ, ತುಮಕೂರಿನ ಸರಸ್ವತಿ ಪುರಂನ 96 ವರ್ಷದ ಪುರುಷ, ಉಪ್ಪಾರಹಳ್ಳಿ ಬಡಾವಣೆ 67 ವರ್ಷದ ಮಹಿಳೆ, ಕುಣಿಗಲ್ ತಾಲ್ಲೂಕು ಸಂತೇಮಾವತ್ತೂರು ಗ್ರಾಮದ 58 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ. ಅಲ್ಲದೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತು ಅನ್ಯ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗಿ ಆ ನಂತರ ಸೋಂಕು ತಗುಲಿದವರು ಸೇರಿದಂತೆ 215 ಮಂದಿ ಮೃತರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1970ಕ್ಕೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.