ತುಮಕೂರು: ಬೋನಿಗೆ ಬಿದ್ದ ಸುಮಾರು ಮೂರು ವರ್ಷದ ಹೆಣ್ಣು ಚಿರತೆ

ತುಮಕೂರು: ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಚಿಕ್ಕ ಕಟ್ಟಿಗೆನಹಳ್ಳಿಯಲ್ಲಿ ಸುಮಾರು ಮೂರು ವರ್ಷದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ರಾತ್ರಿ ಸೆರೆ ಹಿಡಿದಿದ್ದಾರೆ.
ಸೇತುವೆ ಕೊಳಾಯಿ ಒಳಗಡೆ ಅಡಗಿದ್ದ ಚಿರತೆಯನ್ನು ಅಗ್ನಿಶಾಮಕ ಸಿಬ್ಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಸಾಗಿಸುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದರು. ಚಿರತೆಯನ್ನು ಸೆರೆ ಹಿಡಿದಿದ್ದರಿಂದ ಗ್ರಾಮದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.