ಗುಬ್ಬಿ: ತಾಲ್ಲೂಕಿನ 32 ಗ್ರಾಮಪಂಚಾಯಿತಿಯ 590 ಕ್ಷೇತ್ರಗಳ ಪೈಕಿ 589 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದೆ. ಒಂದು ಕ್ಷೇತ್ರದ ಎಣಿಕೆಯನ್ನು ತಡೆಹಿಡಿಯಲಾಗಿದೆ.

ಈ ಬಾರಿ ತಾಲ್ಲೂಕಿನಲ್ಲಿ ಒಟ್ಟು 304 ಮಹಿಳೆಯರು ಆಯ್ಕೆಯಾಗಿದ್ದಾರೆ.

ಒಂದು ಅಥವಾ ಎರಡು ಮತಗಳ ಅಂತರದಲ್ಲಿ ಸೋತವರ ನೋವು ಹೇಳತೀರದು. ಈ ಚುನಾವಣೆಗಳು ಪಕ್ಷಾತೀತವಾಗಿದ್ದರೂ ರಾಜಕೀಯ ಪಕ್ಷಗಳ ಮುಖಂಡರು ಅವರಿಗೆ ಬೇಕಾದ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುವ ಮೂಲಕ ರಾಜಕೀಯ ಬಣ್ಣವನ್ನು ಬಳಿದು ಅವರ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

ಗೆದ್ದಿರುವ ಕೆಲವು ಅಭ್ಯರ್ಥಿಗಳು ಈಗಾಗಲೇ ಚುನಾವಣೆಗೆ ಮಾಡಿರುವ ಸಾಲ ತೀರಿಸುವ ಬಗೆಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಇನ್ನು ಕೆಲವು ಅಭ್ಯರ್ಥಿಗಳು ಅಧಿಕಾರ ಸಿಗುವ ಕಡೆ ಇರುವುದಾಗಿ ಹೇಳುತ್ತಿದ್ದಾರೆ. ತಾಲ್ಲೂಕಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ ನಾಯಕರಲ್ಲಿ ಹೊಂದಾಣಿಕೆ ಕೊರತೆಯಿಂದಾಗಿ ಹೆಚ್ಚು ಸೀಟುಗಳನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎನ್ನುತ್ತವೆ ಮೂಲಗಳು.

ಶಾಸಕರ ಪ್ರಭಾವದಿಂದಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನಗಳಲ್ಲಿ ಗೆದ್ದಿದ್ದಾರೆ. ಬಿಜೆಪಿಯಲ್ಲಿ ಎಸ್.ಡಿ. ದೀಲಿಪ್ ಕುಮಾರ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗಳಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.