ರಕ್ತ ಮಾದರಿ ಪರೀಕ್ಷೆ ಹೆಚ್ಚಳಕ್ಕೆ ಸೂಚನೆ
ಜ್ವರ ಸೇರಿದಂತೆ ಡೆಂಗಿ ರೋಗ ಲಕ್ಷಣ ಕಂಡು ಬಂದವರ ರಕ್ತ ಮಾದರಿ ಪರೀಕ್ಷೆ ಪ್ರಮಾಣ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಸ್ಪತ್ರೆಯ ಡೆಂಗಿ ವಾರ್ಡ್‌ಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ರಕ್ತ ಮಾದರಿ ಪರೀಕ್ಷೆ ಪ್ರಮಾಣ ಹೆಚ್ಚಿಸುವುದರಿಂದ ಡೆಂಗಿ ದೃಢಪಟ್ಟವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಬಹುದು. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗಿ ದೃಢ ಪಟ್ಟವರಿಗೆ ಚಿಕಿತ್ಸೆ ನೀಡಲು ನಿರ್ದೇಶಿಸಬೇಕು ಎಂದರು. ಎಷ್ಟು ಬಾರಿ ಸೂಚನೆ ನೀಡಿದರೂ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ. ಸ್ವಚ್ಛತಾ ಕಾರ್ಯ ಮಾಡುವ ನೌಕರರ ಪಟ್ಟಿ ಹಾಗೂ ಅವರಿಗೆ ಪಾವತಿ ಮಾಡಿರುವ ವೇತನದ ವಿವರ ಸಲ್ಲಿಸುವಂತೆ ತಿಳಿಸಿದರು.