ತುಮಕೂರು: ನಗರದ ಶಿರಾ ಗೇಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ನಗರ ಠಾಣೆ ಪೊಲೀಸರು ಸುಮಾರು ₹4.30 ಲಕ್ಷ ಮೌಲ್ಯದ 5 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ನಗರದ ವೀರಸಾಗರದ ಮುಬಾರಕ್, ತಾಲ್ಲೂಕಿನ ಕೆಸರಮಡು ಗ್ರಾಮದ ಸೈಯದ್ ವಸೀಮ್ ಬಂಧಿತರು. ಮಹಾರಾಷ್ಟ್ರ ಸೇರಿದಂತೆ ವಿವಿಧ ಕಡೆಗಳಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಮತ್ತು ಕೂಲಿಕಾರರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು. ವಸೀಮ್ ಬಳಿ ಗಾಂಜಾ ತೆಗೆದುಕೊಂಡು ಹೋಗಲು ಮುಬಾರಕ್ ಬಂದಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

‘ಇಬ್ಬರು ಹಲವು ವರ್ಷಗಳಿಂದ ಗಾಂಜಾ ಮಾರಾಟ ಮಾಡುತ್ತಿದ್ದರು. ಬೇರೆ ರಾಜ್ಯಗಳಿಂದ ಗಾಂಜಾ ತರಿಸಿಕೊಳ್ಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಠಾಣೆ ಇನ್ಸ್ಪೆಕ್ಟರ್ ಅವಿನಾಶ್, ಸಬ್ ಇನ್ಸ್ಪೆಕ್ಟರ್ ಮಂಜುಳಾ, ಸಿಬ್ಬಂದಿ ಚೇತನ್, ಮಂಜುನಾಥ್, ಅಂಜಲ್, ಗೌತಮ್, ನರಸಿಂಹರಾಜು ಅವರ ತಂಡ ಕಾರ್ಯಾಚರಣೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.