ಲೈಸೆನ್ಸ್ ನವೀಕರಣಕ್ಕೆ ಲಂಚ; ಎಸಿಬಿ ದಾಳಿ

7

ಲೈಸೆನ್ಸ್ ನವೀಕರಣಕ್ಕೆ ಲಂಚ; ಎಸಿಬಿ ದಾಳಿ

Published:
Updated:

ತುಮಕೂರು: ಎಲೆಕ್ಟ್ರಿಕ್ ಗುತ್ತಿಗೆದಾರರ ಲೈಸೆನ್ಸ್ ನವೀಕರಣಕ್ಕೆ ಮಂಗಳವಾರ ₹ 10 ಸಾವಿರ ಲಂಚ ಪಡೆಯುತ್ತಿದ್ದ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರ್ ಕಚೇರಿಯ ಸಿಬ್ಬಂದಿ ಶಿವಮೂರ್ತಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬೀಸಿದ ಬಲೆಗೆ ಬಿದ್ದಿದ್ದಾರೆ.

ನಗರದ ಸರಸ್ವತಿಪುರಂ ನಿವಾಸಿಯೊಬ್ಬರು ಎಲೆಕ್ಟ್ರಿಕಲ್ ಗುತ್ತಿಗೆದಾರರ ಲೈಸೆನ್ಸ್ ನವೀಕರಣಕ್ಕೆ ಅರ್ಜಿ ಸಲ್ಲಿಸಿದ್ದರು. ನವೀಕರಣಕ್ಕೆ ಆರೋಪಿ ಶಿವಮೂರ್ತಿ ₹ 12,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ₹ 10 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ನಡೆಸಿದ ದಾಳಿಗೆ ಸಿಕ್ಕಿ ಬಿದ್ದಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !