ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾವಗಡ: 61 ಕೆ.ಜಿ ಗಾಂಜಾ ವಶ, ಆರೋಪಿ ಬಂಧನ

Last Updated 5 ನವೆಂಬರ್ 2022, 10:04 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿ ಆರ್.ಅಚ್ಚಮ್ಮನಹಳ್ಳಿ ಬಳಿ ಬೆಳೆಯಲಾಗಿದ್ದ ಸುಮಾರು 61 ಕೆ.ಜಿ ಗಾಂಜಾ ಸೊಪ್ಪನ್ನು ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಗ್ರಾಮದ ಸಿದ್ದಪ್ಪ (67) ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಲಾರ್ ಪ್ಲಾಂಟ್ ಪಕ್ಕದ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಮಾಹಿತಿ ಆಧರಿಸಿ ಸರ್ಕಲ್ ಇನ್‌ಸ್ಪೆಕ್ಟರ್ ಕಾಂತರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿದೆ. ತಿರುಮಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT