ಗುರುವಾರ , ಫೆಬ್ರವರಿ 2, 2023
27 °C
ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ತಲೆ ಸುತ್ತು, ವಾಂತಿ

ಮಧುಗಿರಿ | ಮೆದುಳು ಜ್ವರಕ್ಕೆ ಲಸಿಕೆ ಪಡೆದ 7 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ: ಜೆ.ಇ ಲಸಿಕೆ (ಮೆದುಳು ಜ್ವರ) ಪಡೆದ 7 ವಿದ್ಯಾರ್ಥಿಗಳಿಗೆ ಸೋಮವಾರ ತಲೆ ಸುತ್ತು, ವಾಂತಿ ಕಾಣಿಸಿಕೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ಎಂಜಿಎಂ ಶಾಲೆಯ ವಿದ್ಯಾರ್ಥಿಗಳಿಗೆ ಜೆ.ಇ ಲಸಿಕೆ ಅಭಿಯಾನದಲ್ಲಿ ಲಸಿಕೆ ಹಾಕಿದ್ದು, ಇದರಲ್ಲಿ 7 ಮಕ್ಕಳಿಗೆ ತಲೆ ಸುತ್ತು, ವಾಂತಿಯಾಗಿದೆ. ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.

ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆತಂಕವಿಲ್ಲ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶಬಾಬು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು