ತುಮಕೂರು: ಜಿಲ್ಲೆಯ ಸಾಕ್ಷರತೆ ಪ್ರಮಾಣ ಶೇ 75.14ರಷ್ಟಿದ್ದು, ಇದನ್ನು ಶೇ 100ಕ್ಕೆ ಕೊಂಡೊಯ್ಯಲು ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಡಯಟ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಚೇರಿಯಿಂದ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

‘ಬಹು ಭಾಷೆಗಳ ಮೂಲಕ ಸಾಕ್ಷರತೆಯ ಉತ್ತೇಜನ’ ಎಂಬ ಧ್ಯೇಯವಾಕ್ಯದೊಂದಿಗೆ ಸಾಕ್ಷರತಾ ದಿನ ಆಚರಿಸಲಾಗುತ್ತಿದೆ. ಸಾಕ್ಷರತೆಯಿಂದ ಜ್ಞಾನ ವೃದ್ಧಿಯಾಗುವುದಲ್ಲದೆ, ಸಾಮಾಜಿಕ ಅನಿಷ್ಟ ಪದ್ಧತಿ ನಿವಾರಿಸಬಹುದು. ಜಿಲ್ಲೆಯ ಶೇ 85.70ರಷ್ಟು ಪುರುಷರು, ಶೇ 67.38ರಷ್ಟು ಮಹಿಳೆಯರು ಅಕ್ಷರಸ್ಥರಾಗಿದ್ದಾರೆ. ಸಾಕ್ಷರತೆಯಿಂದ ಅನಕ್ಷರಸ್ಥರಲ್ಲಿ ಸ್ವಾವಲಂಬನೆ ಹೆಚ್ಚುತ್ತದೆ. ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಯಬಹುದು ಎಂದರು.

ಜಿಲ್ಲಾ ಶಿಕ್ಷಣಾಧಿಕಾರಿ ನರಸಿಂಹಯ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ಡಯಟ್ ಉಪನಿರ್ದೇಶಕ ಕೆ.ಮಂಜುನಾಥ್, ಇಒ ಮಾಧವರೆಡ್ಡಿ, ಡಿಇಒ ಲಕ್ಷ್ಮಿಜನಾರ್ದನ್, ಬಿಇಒ ಹನುಮಂತಯ್ಯ, ಡಯಟ್ ಉಪನ್ಯಾಸಕರಾದ ಎನ್.ನಂಜುಂಡಯ್ಯ, ರಂಗರಾಜು, ಕಾರ್ಯಕ್ರಮದ ಸಹಾಯಕ ಅಧಿಕಾರಿ ಸಿ.ಎಂ.ಲಕ್ಷ್ಮಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.