ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

766 ಬೋರ್‌ವೆಲ್ ನೀರು ಕುಡಿಯಲು ಯೋಗ್ಯವಲ್ಲ

Published 30 ಮೇ 2024, 7:06 IST
Last Updated 30 ಮೇ 2024, 7:06 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಈವರೆಗೆ 31,099 ನೀರಿನ ಮೂಲಗಳಿಂದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 766 ಕಡೆಯ ನೀರು ಕುಡಿಯಲು ಯೋಗ್ಯವಲ್ಲ ಎಂಬುವುದು ದೃಢಪಟ್ಟಿದೆ. ಆದರೂ ಅದೇ ನೀರನ್ನು ಸರಬರಾಜು ಮಾಡಲಾಗುತ್ತಿದೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಆರೋಗ್ಯ ಇಲಾಖೆಯ ಸಭೆಯಲ್ಲಿ ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ರಾಮೇಗೌಡ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಏಪ್ರಿಲ್‍ ವರೆಗೆ 173 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. 1,244 ಕರುಳುಬೇನೆ, 20 ಕುಷ್ಠರೋಗ, 872 ಕ್ಷಯ, 9,589 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. 1,200 ಜನರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 136 ಜನರಲ್ಲಿ ಡೆಂಗಿ ಖಚಿತಪಟ್ಟಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ‘ಡೆಂಗಿ ಪ್ರಕರಣ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಫಾಗಿಂಗ್‌ ಮಾಡಿಸಬೇಕು. ಹಾವು ಕಡಿತಕ್ಕೊಳಗಾದವರು ನಾಟಿ ವೈದ್ಯರಿಂದ ಚಿಕಿತ್ಸೆ ಪಡೆಯದೆ, ಆಸ್ಪತ್ರೆಗೆ ದಾಖಲಾಗಬೇಕು. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಹಂದಿಗಳಿಂದ ಮೆದುಳು ಜ್ವರ ಹರಡುವ ಸಾಧ್ಯತೆ ಇದೆ. ಹಂದಿಗಳನ್ನು ಜನರ ವಾಸಸ್ಥಳದಿಂದ ಕನಿಷ್ಠ 3 ಕಿ.ಮೀ ದೂರದಲ್ಲಿ ಇರುವಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್‌.ಮಂಜುನಾಥ್, ಮಲೇರಿಯಾ ನಿರ್ಮೂಲನಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್‌ ಬೇಗ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್‌ಕುಮಾರ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT