ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹8 ಲಕ್ಷ ಹಣ ಜಪ್ತಿ

Published 19 ಮಾರ್ಚ್ 2024, 3:19 IST
Last Updated 19 ಮಾರ್ಚ್ 2024, 3:19 IST
ಅಕ್ಷರ ಗಾತ್ರ

ತುಮಕೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 8 ಲಕ್ಷ ಹಣವನ್ನು ನಗರದ ಬಟವಾಡಿ ಚೆಕ್‌ ಪೋಸ್ಟ್‌ ಬಳಿ ಚುನಾವಣೆ ಕರ್ತವ್ಯದಲ್ಲಿ ಇದ್ದ ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ತಸೀನಾ ಬಾನು ತುಮಕೂರು ನಗರಕ್ಕೆ ಕಾರಿನಲ್ಲಿ ಬರುತ್ತಿದ್ದ ಸಮಯದಲ್ಲಿ ಚೆಕ್ ಪೋಸ್ಟ್‌ನಲ್ಲಿ ಇದ್ದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆ ಸಮಯದಲ್ಲಿ ಕಾರಿನಲ್ಲಿ ₹ 8 ಲಕ್ಷ ಪತ್ತೆಯಾಗಿದೆ. ನಗರದಲ್ಲಿ ನಿವೇಶನ ಖರೀದಿಸಲು ಹಣದ ಸಹಿತ ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.

ಆದರೆ ಹಣದ ಮೂಲಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಸಲ್ಲಿಸಿಲ್ಲ. ಹಾಗಾಗಿ ಹಣ ಮುಟ್ಟುಗೋಲು ಹಾಕಿಕೊಂಡಿದ್ದು, ಜಿಲ್ಲಾ ಖಜಾನೆಗೆ ಜಮೆ ಮಾಡಿದ್ದಾರೆ.

ಚುನಾವಣಾಧಿಕಾರಿ ಪವನ್ ಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಚೆಕ್ ಪೋಸ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT