ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುನ್ಹಾ ಸಮಿತಿಗೆ 8 ತಿಂಗಳು ಹೆಚ್ಚು ಸಮಯ: ಜಿ.ಪರಮೇಶ್ವರ

Published 3 ಸೆಪ್ಟೆಂಬರ್ 2024, 2:26 IST
Last Updated 3 ಸೆಪ್ಟೆಂಬರ್ 2024, 2:26 IST
ಅಕ್ಷರ ಗಾತ್ರ

ತುಮಕೂರು: ಕೋವಿಡ್ ಸಮಯದಲ್ಲಿ ನಡೆದಿರುವ ಹಗರಣ ಸಂಬಂಧ ತನಿಖೆಗೆ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಸಮಿತಿಯ ಕಾಲಾವಧಿಯನ್ನು ಇನ್ನೂ ಎಂಟು ತಿಂಗಳು ವಿಸ್ತರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಿತಿ ಮಧ್ಯಂತರ ವರದಿ ನೀಡಿದ್ದು, ಅಂತಿಮ ವರದಿ ಸಲ್ಲಿಸಲು ಸಮಯಾವಕಾಶ ಬೇಕಾಗಿದೆ. ಹಾಗಾಗಿ ಮತ್ತಷ್ಟು ಕಾಲಾವಕಾಶ ನೀಡಲಾಗಿದೆ’ ಎಂದರು.

‘ಬಿಜೆಪಿಯವರು ಮುಡಾ ವಿಚಾರ ಮುಂದಿಟ್ಟುಕೊಂಡು ಹೋರಾಟ ಆರಂಭಿಸಿದ ನಂತರ ಹಿಂದಿನ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸಲು ಮುಂದಾಗಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಮಯದಲ್ಲೇ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ನಡೆಸಲಾಗುವುದು ಎಂದು ಹೇಳಿದ್ದೇವೆ. ಕುನ್ಹಾ ಸಮಿತಿಯನ್ನು ನಿನ್ನೆ, ಮೊನ್ನೆ ನೇಮಿಸಿದ್ದಲ್ಲ. ಸಾಕಷ್ಟು ಹಿಂದೆಯೇ ನೇಮಕ ಮಾಡಿದ್ದು, ಈಗ ಮಧ್ಯಂತರದ ವರದಿ ನೀಡಿದೆ’ ಎಂದು ಹೇಳಿದರು.

‘ಸಚಿವ ಸತೀಶ್ ಜಾರಕಿಹೊಳಿ ಜತೆ ಒಟ್ಟಿಗೆ ಊಟ ಮಾಡಿ ರಾಜಕೀಯ ವಿಚಾರ ಚರ್ಚಿಸಿದ್ದೇನೆ. ಈಗ ಆ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬದಲಾವಣೆ ಮಾಡಬೇಕಾದ ಸಮಯ ಬಂದಾಗ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ’ ಎಂದು
ಸ್ಪಷ್ಟಪಡಿಸಿದರು.

ಗುತ್ತಿಗೆದಾರ ಸಂಘದವರು ಮಾಡಿರುವ ಶೇ 40ರಷ್ಟು ಕಮಿಷನ್ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಹಿಂದೆಯೂ ಇಂತಹ ಟೀಕೆ, ಆರೋಪಗಳು ಬಂದಿದ್ದವು. ಈಗಲೂ ಮಾಡುತ್ತಿದ್ದಾರೆ. ಅವರ ಆರೋಪಕ್ಕೆ ಸಮರ್ಪಕ ದಾಖಲೆಗಳಿದ್ದರೆ ಸಂಬಂಧಪಟ್ಟವರ ಬಳಿ ದೂರು ನೀಡಲಿ’ ಎಂದು
ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT