ಶನಿವಾರ, ಜೂನ್ 12, 2021
24 °C

83 ವಾಹನ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಕೋವಿಡ್‌ ತಡೆಗೆ ಸರ್ಕಾರ ಜಾರಿಗೊಳಿಸಿರುವ ಕರ್ಫ್ಯೂ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುತ್ತಿದ್ದ 35 ಕಾರು ಹಾಗೂ 48 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರು, ಗೌರಿಬಿದನೂರು ರಸ್ತೆ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡು ಠಾಣೆಯ ಮುಂಭಾಗ ನಿಲುಗಡೆ ಮಾಡಿದರು.

ಮಧ್ಯಾಹ್ನ ಎರಡು ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದರೂ, ಆನಂತರವೂ ಕೆಲವರು ಅನಗತ್ಯವಾಗಿ ಸಂಚರಿಸುತ್ತಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಹಾಗೂ ಕಾರುಗಳ ದಾಖಲೆ ಪರಿಶೀಲಿಸಿ, ಸೋಮವಾರದಿಂದ ಅನಗತ್ಯವಾಗಿ ವಾಹನಗಳ ಸಂಚಾರ ಮಾಡದಂತೆ ಸೋಮವಾರ ಬೆಳಿಗ್ಗೆಯಿಂದ ಆರಂಭವಾಗಲಿರುವ ಕರ್ಫ್ಯೂ ಮತ್ತಷ್ಟು ಕಠಿಣವಾಗಿರುವುದರಿಂದ ಅನಗತ್ಯವಾಗಿ ವಾಹನಗಳ ಓಡಾಟ ನಡೆಸಿದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಸಿಪಿಐ ಎಂ.ಎಸ್.ಸರ್ದಾರ್ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.