ತುಮಕೂರು: ಅಧಿಕಾರ ಪಡೆಯುವ ಉದ್ದೇಶದಿಂದ ರಾಜಕಾರಣ, ಹೋರಾಟ ಮಾಡುವುದಿಲ್ಲ. ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ನಡೆಯುವ ಪಾದಯಾತ್ರೆ ಪಕ್ಷಾತೀತವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದರು.

ಪಕ್ಷಾತೀತವಾಗಿ ಎಲ್ಲ ಸಂಘಟನೆಗಳು ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಯಾವುದೇ ಅಧಿಕಾರ ಮುಖ್ಯವಲ್ಲ. ಜನತೆಗೆ ಅಭಿವೃದ್ಧಿ ಶೀಲ ಕರ್ನಾಟಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಪಾದಯಾತ್ರೆ ಕೈಗೊಳ್ಳಲಾಗಿದೆ. ಕನ್ನಂಬಾಡಿ ನಿರ್ಮಾಣದ ನಂತರ ನಡೆಯುತ್ತಿರುವ ಕಾವೇರಿ ಹೋರಾಟದಲ್ಲಿ ರಾಜ್ಯದ ಪಾಲಿನ ನೀರನ್ನು ಬಳಸಿಕೊಳ್ಳಲು ಅವಕಾಶವಿದ್ದರು, ಅಣೆಕಟ್ಟು ನಿರ್ಮಾಣ ಮಾಡುವುದಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ₹9 ಸಾವಿರ ಕೋಟಿ ಯೋಜನೆಯಲ್ಲಿ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ, ಇದರಿಂದ ರಾಜ್ಯ ಮತ್ತು ತಮಿಳುನಾಡಿಗೆ ಅನುಕೂಲವಾಗಲಿದೆ. ಈ ಯೋಜನೆಯಿಂದ ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಯ ಲಾಭ ರಾಜ್ಯಕ್ಕೆ ಆಗಲಿದೆ. ಜಿಲ್ಲೆಗೂ ಮೇಕೆದಾಟು ಯೋಜನೆಯ ಪ್ರಯೋಜನವಾಗಲಿದೆ. ಜ.9ರಿಂದ 19ರವರೆಗೆ ಪಾದಯಾತ್ರೆಯ ಮೂಲಕ ನಡೆಯುವ ಹೋರಾಟ ಇತಿಹಾಸದ ಪುಟದಲ್ಲಿ ಉಳಿಯಲಿದೆ ಎಂದರು.

ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್, ಜನರ ಮೇಲೆ ಹೊರೆಯಾಗದಂತೆ ಮಾಡಿಕೊಳ್ಳಲಿ. ವಿಧಾನಸೌಧದಲ್ಲಿ ಜನಪ್ರತಿನಿಧಿಗಳೆಲ್ಲ ಸೇರಿ ನಿರ್ಣಯ ಕೈಗೊಂಡು ಮುಖ್ಯಮಂತ್ರಿಗೆ ಬೆಂಬಲ ಸೂಚಿಸಿದ್ದೇವೆ. ಮುಖ್ಯಮಂತ್ರಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆಎಂದು ಹೇಳಿದರು.

ಸೋನಿಯಾಗಾಂಧಿ ಅವರ ಸೂಚನೆಯಂತೆ ಬೂತ್ ಮಟ್ಟದಲ್ಲಿ ಪಕ್ಷದಸದಸ್ಯತ್ವ ನೋಂದಣಿಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿದೆ. ಆನ್ಲೈನ್ ನೋಂದಣಿಗೂ ಅನುಕೂಲ ಮಾಡಿಕೊಡಲಾಗುತ್ತದೆ. ರಾಜ್ಯದಲ್ಲಿ ಸಂಭ್ರಮದ ರೀತಿಯಲ್ಲಿ ಸದಸ್ಯತ್ವ ನೋಂದಣಿ ನಡೆಯುತ್ತಿದ್ದು, ಪಕ್ಷದ ಪದಾಧಿಕಾರಿಗಳಿಗೆ ಡಿ.27ರಂದು ಆನ್ಲೈನ್ ನೋಂದಣಿ ಬಗ್ಗೆ ಜಾಗೃತಿ ಕಾರ್ಯಾಗಾರ ನಡೆಯಲಿದೆ ಎಂದು ತಿಳಿಸಿದರು.

ಶಾಸಕ ಡಾ.ಜಿ.ಪರಮೇಶ್ವರ, ‘ಮೇಕೆದಾಟು ಯೋಜನೆಗೆ ಸರ್ಕಾರ ಮುತುವರ್ಜಿವಹಿಸಿ ಕೆಲಸ ಮಾಡಬೇಕು. ಆದರೆ ರಾಜ್ಯ ಸರ್ಕಾರಕ್ಕೆ ಆ ಬದ್ಧತೆಯಿಲ್ಲ. ರಾಜ್ಯದ 26 ಸಂಸದರು ಇದರ ಕುರಿತು ಸದನದಲ್ಲಿ ಧ್ವನಿಎತ್ತಬೇಕು’ ಎಂದರು.

ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಭದ್ರತೆ ಸಿಗಲಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದರು ಸಹ ಒಪ್ಪಿಗೆ ಪಡೆಯಲು ಮುಂದಾಗುತ್ತಿಲ್ಲ. ಬಿಜೆಪಿಗೆ ಜನರ ಹಿತ ಬೇಕಾಗಿಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷಗಳಲ್ಲಿ ₹58 ಸಾವಿರ ಕೋಟಿ ನೀರಾವರಿಗೆ ಖರ್ಚು ಮಾಡಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ರಂಗನಾಥ್, ವೆಂಕಟರಮಣಪ್ಪ, ಮುಖಂಡ ಟಿ.ಬಿ.ಜಯಚಂದ್ರ, ಚಂದ್ರಪ್ಪ, ಕೆ.ಎನ್.ರಾಜಣ್ಣ, ಷಡಕ್ಷರಿ, ರಫೀಕ್ ಅಹ್ಮದ್, ರಾಮಕೃಷ್ಣಪ್ಪ, ಶಫೀ ಅಹ್ಮದ್, ಮುರುಳೀಧರ ಹಾಲಪ್ಪ, ಲಕ್ಷ್ಮಿನಾರಾಯಣ್, ಗೋವಿಂದಪ್ಪ, ಪ್ರೊ.ರಾಧಾಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.