ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಗುಬ್ಬಿ ಬಳಿ ವಾಹನ ಡಿಕ್ಕಿ ಹೊಡೆದು ಹೆಣ್ಣು ಚಿರತೆ ಸಾವು

Published 12 ಫೆಬ್ರುವರಿ 2024, 11:18 IST
Last Updated 12 ಫೆಬ್ರುವರಿ 2024, 11:18 IST
ಅಕ್ಷರ ಗಾತ್ರ

ಗುಬ್ಬಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸುಮಾರು 3 ವರ್ಷದ ಹೆಣ್ಣು ಚಿರತೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಡಬ ಹೋಬಳಿ ನಿಂಗಮ್ಮನಹಳ್ಳಿ ಗ್ರಾಮದ ಬಳಿ ಗುಬ್ಬಿ– ಸಿ.ಎಸ್.ಪುರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಅಂತಿಮ ಸಂಸ್ಕಾರ ನಡೆಸಲಾಯಿತು. ‌‌‌‌‌

ಇತ್ತೀಚೆಗೆ ಈ ಭಾಗದಲ್ಲಿ ಚಿರತೆಗಳು ಹೆಚ್ಚಾಗಿದ್ದು, ಹಗಲಿನಲ್ಲೂ ಸಂಚರಿಸುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ರೈತರು ಕೃಷಿ ಕೆಲಸಕ್ಕೆ ಜಮೀನಿಗೆ ಹೋಗಲು ಭಯಪಡುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT