ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಗೋವಿಂದ ಕಾರಜೋಳಗೆ ಅದ್ದೂರಿ ಸ್ವಾಗತ

Published 29 ಮಾರ್ಚ್ 2024, 14:07 IST
Last Updated 29 ಮಾರ್ಚ್ 2024, 14:07 IST
ಅಕ್ಷರ ಗಾತ್ರ

ಶಿರಾ: ನಗರದ ಅಂಬೇಡ್ಕರ್ ವೃತ್ತದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಗೋವಿಂದ ಕಾರಜೋಳ, ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದೇ ತಾಯಿ ಮಕ್ಕಳಂತೆ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ಬಿಜೆಪಿ ಅಭ್ಯರ್ಥಿಗಳು ಇರುವ ಕಡೆ ಬಿಜೆಪಿಗೆ ಮತ್ತು ಜೆಡಿಎಸ್ ಅಭ್ಯರ್ಥಿಗಳು ಇರುವ ಕಡೆ ಜೆಡಿಎಸ್ ಪರವಾಗಿ ಎರಡು ಪಕ್ಷದವರು ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

ಜೆಡಿಎಸ್ ಮುಖಂಡರಾದ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಮುಡಿಮಡು ರಂಗಶ್ವಾಮಯ್ಯ, ರಹಮತ್, ಅಂಜಿನಪ್ಪ, ಆರ್.ರಾಘವೇಂದ್ರ, ಸತ್ಯಪ್ರಕಾಶ್, ಪಡಿರಮೇಶ್, ಬಿಜೆಪಿ ಮುಖಂಡರಾದ ಬಿ.ಕೆ.ಮಂಜುನಾಥ್, ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಮಾ ವಿಜಯರಾಜು, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಸುರೇಶ್, ಬರಗೂರು ತಿಪ್ಪೇಸ್ವಾಮಿ, ಮದ್ದೇವಳ್ಳಿ ರಾಮಕೃಷ್ಣ, ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಮುಡಿಮಡು ಮಂಜುನಾಥ್, ಸಂತೇಪೇಟೆ ನಟರಾಜು, ಪ್ರಕಾಶ್ ಮುದ್ದರಾಜು, ಯುವರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT