ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಿಲು ಮುಚ್ಚಿದ ‘ಸ್ಮಾರ್ಟ್‌’ ಶೌಚಾಲಯ

ಸಾರ್ವಜನಿಕರು, ಕ್ರೀಡಾಪಟುಗಳು ಪರದಾಟ
Published 9 ಮೇ 2024, 7:45 IST
Last Updated 9 ಮೇ 2024, 7:45 IST
ಅಕ್ಷರ ಗಾತ್ರ

ತುಮಕೂರು: ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸ್ಮಾರ್ಟ್‌ ಸಿಟಿಯಿಂದ ನಿರ್ಮಿಸಿರುವ ಶೌಚಾಲಯ ಬಾಗಿಲು ಹಾಕಿದ್ದು, ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಶೌಚಾಲಯಗಳು ಸಾರ್ವಜನಿಕರ ಉಪಯೋಗಕ್ಕೆ ಬರುತ್ತಿಲ್ಲ.

ಆವರಣದಲ್ಲಿ ಆಲದ ಮರದ ಪಾರ್ಕ್‌ ಅಭಿವೃದ್ಧಿಪಡಿಸಿದ್ದು, ಅದರ ಮುಂಭಾಗದಲ್ಲಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪಕ್ಕ ತಲಾ ಎರಡು ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರ ಕಾಮಗಾರಿ ಮುಗಿದು ವರ್ಷಗಳೇ ಕಳೆದರೂ ಸಾರ್ವಜನಿಕರ ಉಪಯೋಗಕ್ಕೆ ಮಾತ್ರ ನೀಡುತ್ತಿಲ್ಲ. ಪ್ರತಿ ನಿತ್ಯ ಇಲ್ಲಿಗೆ ಅಭ್ಯಾಸಕ್ಕೆ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರಿಗೆ ಇದರಿಂದ ತುಂಬಾ ಸಮಸ್ಯೆಯಾಗುತ್ತಿದೆ.

ದೊಡ್ಡಮಟ್ಟದ ಕಾರ್ಯಕ್ರಮಗಳು ನಡೆದಾಗ ಶೌಚಾಲಯಕ್ಕೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಗರದ ಪ್ರಮುಖ ಸ್ಥಳದಲ್ಲಿರುವ ಶೌಚಾಲಯಗಳ ಬಗ್ಗೆ ಇಷ್ಟು ನಿರ್ಲಕ್ಷ್ಯ ವಹಿಸಿದರೆ ಹೇಗೆ ಎಂಬುವುದು ಸಾರ್ವಜನಿಕರ ಪ್ರಶ್ನೆ. ಆಲದ ಮರದ ಪಾರ್ಕ್‌ಗೆ ನಿತ್ಯ ನೂರಾರು ಜನ ಸಾರ್ವಜನಿಕರು ಭೇಟಿ ನೀಡುತ್ತಾರೆ. ಸಾರ್ವಜನಿಕ ಶೌಚಾಲಯ ಇದ್ದರೂ ಬಳಕೆಗೆ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನಿರ್ವಹಣೆಯ ಸವಾಲಿನಿಂದ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಸ್ಮಾರ್ಟ್‌ ಸಿಟಿಯಿಂದ ಕಟ್ಟಡ ನಿರ್ಮಿಸಿದ್ದರೂ ಸಂಬಂಧಪಟ್ಟವರು ಅದನ್ನು ಹಸ್ತಾಂತರ ಮಾಡಿಕೊಂಡು ನಿರ್ವಹಣೆಗೆ ಆಸಕ್ತಿ ತೋರುತ್ತಿಲ್ಲ. ಸ್ಮಾರ್ಟ್‌ ಸಿಟಿಯಡಿ ಪೂರ್ಣಗೊಳಿಸಿದ ಹಲವು ಕಾಮಗಾರಿಗಳ ಪರಿಸ್ಥಿತಿ ಹೀಗೆ ಇದೆ. ಬೃಹತ್‌ ಕಟ್ಟಡ ಕಟ್ಟುತ್ತಾರೆ. ಆದರೆ ನಿರ್ವಹಣೆಗೆ ಮಾತ್ರ ಯಾರೊಬ್ಬರೂ ಮುಂದೆ ಬರುವುದಿಲ್ಲ. ಶೌಚಾಲಯಗಳ ಸ್ಥಿತಿಯೂ ಹಾಗೆಯೇ ಆಗಿದೆ.

ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ಶೌಚಾಲಯಕ್ಕೆ ಬೀಗ ಹಾಕಿರುವುದು
ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ಶೌಚಾಲಯಕ್ಕೆ ಬೀಗ ಹಾಕಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT