ಗುರುವಾರ , ಮಾರ್ಚ್ 4, 2021
17 °C

ಬಡ ಜನತೆಗೆ ಶೀಘ್ರದಲ್ಲೇ ನಿವೇಶನ: ಶಾಸಕ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ನಗರದ ಬಹುತೇಕ ಕಡೆ ಬಡಜನತೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು ಅರ್ಹರಿಗೆ ಅತಿ ಶೀಘ್ರವಾಗಿ ನಿವೇಶನ ಹಂಚಿಕೆ ಮಾಡುವುದಾಗಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.

ನಗರದ ಕೋಟೆ ಬಡಾವಣೆಯಲ್ಲಿ ಸೋಮವಾರ ₹42 ಲಕ್ಷ ವೆಚ್ಚದ ಸಿ.ಸಿ ರಸ್ತೆ ಮತ್ತು ಸಿ.ಸಿ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದ ನಗರದ ಪ್ರತಿ ವಾರ್ಡ್‌ಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ರಸ್ತೆ, ಕುಡಿಯುವ ನೀರು, ಚರಂಡಿಯಂತಹ ಮೂಲ ಸೌಕರ್ಯಗಳನ್ನು ಪ್ರತಿಯೊಬ್ಬರಿಗೂ ಒದಗಿಸಲಾಗುವುದು ಎಂದರು.

ಸಂಸದ ಎ.ನಾರಾಯಣಸ್ವಾಮಿ, ನಾರು ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಪೌರಾಯುಕ್ತ ಪರಮೇಶ್ವರಪ್ಪ, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯರಾಜು, ಕೋಟೆ ರವಿ, ರಮೇಶ್ ಬಾಬು, ಬಸವರಾಜು, ಸುಧಾಕರ್ ಗೌಡ, ಮಾಲಿ ಸಿ.ಎಲ್.ಗೌಡ, ಪ್ರಕಾಶ್ ಗೌಡ, ರಮೇಶ್, ಸುರೇಶ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.