ತುಮಕೂರು: ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಶಿಕ್ಷಕ ಸಾವು

ತುಮಕೂರು: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಂಗಳವಾರ ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.
ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಸಮಯದಲ್ಲಿ ಘಟನೆ ನಡೆದಿದೆ.
ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಅವರನ್ನು ರಕ್ಷಿಸುವ ವೇಳೆಗೆ ಮೃತಪಟ್ಟಿದ್ದರು.
ಸಮೀಕ್ಷೆಯಲ್ಲಿ ಮೂರಂಕಿ ಮೀರದ ಬಿಜೆಪಿಯಿಂದ ರಕ್ತಪಾತ ಸೃಷ್ಟಿ: ಕುಮಾರಸ್ವಾಮಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.