ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಪಾಲರ ಅಧಿಕಾರ ದುರುಪಯೋಗ: ಸಿಪಿಎಂ ಟೀಕೆ

Published : 4 ಆಗಸ್ಟ್ 2024, 16:53 IST
Last Updated : 4 ಆಗಸ್ಟ್ 2024, 16:53 IST
ಫಾಲೋ ಮಾಡಿ
Comments

ತುಮಕೂರು: ರಾಜ್ಯಪಾಲರ ಅಧಿಕಾರ ದುರುಪಯೋಗ ಪಡಿಸಿಕೊಂಡು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಎಂ) ಟೀಕಿಸಿದೆ.

‘ಆಡಳಿತ ಪಕ್ಷವನ್ನು ದುರ್ಬಲಗೊಳಿಸಲು ಬಿಜೆಪಿ ಮುಂದಾಗಿದೆ. ಬಹುಮತ ಇಲ್ಲದಿದ್ದರೂ ಬಲವಂತವಾಗಿ ತಮ್ಮ ಸರ್ಕಾರ ಸ್ಥಾಪನೆಗೆ ಕ್ರಮ ವಹಿಸಲು ರಾಜ್ಯಪಾಲರ ಕಚೇರಿ ಹಾಗೂ ಅವರ ವಿವೇಚನಾಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್‌ ಮುಜೀಬ್‌, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್‌, ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಆರೋಪಿಸಿದ್ದಾರೆ.

ಬರಗಾಲ, ಅತಿವೃಷ್ಟಿ, ಬೆಲೆ ಏರಿಕೆಯ ಹೊರೆಯಿಂದ ರಾಜ್ಯದ ಜನತೆ ಬಳಲುತ್ತಿದ್ದಾರೆ. ಬಿಜೆಪಿ ವಿರೋಧ ಪಕ್ಷವಾಗಿ ವಿಧಾನಸಭೆಯಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ, ರಾಜ್ಯದ ಅಭಿವೃದ್ಧಿಗೆ ಸಹಕರಿಸಬೇಕಿತ್ತು. ಆದರೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಜಾಪ್ರಭುತ್ವ ವಿರೋಧಿಯಂತೆ ವರ್ತಿಸುತ್ತಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಹಾಗೂ ಒಕ್ಕೂಟ ಸರ್ಕಾರ ರಾಜ್ಯ ಸರ್ಕಾರದ ಮೇಲೆ ನಡೆಸುತ್ತಿರುವ ಪ್ರಜಾಪ್ರಭುತ್ವ ಹಾಗೂ ಜನ ವಿರೋಧಿ ದಬ್ಬಾಳಿಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT