ಶನಿವಾರ, ಸೆಪ್ಟೆಂಬರ್ 24, 2022
21 °C

ಬಸ್– ಕಾರು ಮಧ್ಯೆ ಅಪಘಾತ: ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತಿಪಟೂರು ತಾಲ್ಲೂಕಿನ ಕೋಟನಾಯಕನಹಳ್ಳಿ ಹತ್ತಿರ ಮಂಗಳವಾರ ರಾತ್ರಿ ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಹಾಸನದ ಹರ್ಷತ್ ಖಾನ್ (21) ಮೃತಪಟ್ಟಿದ್ದಾರೆ.

ತಿಪಟೂರಿಂದ ಕೆ.ಬಿ.ಕ್ರಾಸ್ ಕಡೆ ತೆರಳುತ್ತಿದ್ದ ಬಸ್ ಮತ್ತು ಕೆ.ಬಿ.ಕ್ರಾಸ್‌ನಿಂದ ತಿಪಟೂರಿಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹರ್ಷತ್ ಖಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.