ಕೊರಟಗೆರೆ: ತಾಲ್ಲೂಕಿನ ಗೌಡನಕುಂಟೆ ಸಮೀಪ ವಿದ್ಯಾರ್ಥಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಸರಕು ಸಾಗಣೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ಕು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹೇಮಂತ್, ಜಿತೇಂದ್ರ ಪ್ರಸಾದ್, ಮಿಥುನ್, ಪ್ರಭಾಸ್ ಗಾಯಗೊಂಡ ವಿದ್ಯಾರ್ಥಿಗಳು.

ಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶುಕ್ರವಾರ ತಾಲ್ಲೂಕಿನ ಚಿಕ್ಕಸಾಗ್ಗೆರೆ ಬಳಿಯ ಉದ್ಯಾನಕ್ಕೆ ಕರೆದುಕೊಂಡು ಹೋಗಲಾಗಿತ್ತು. 80ಕ್ಕೂ ಹೆಚ್ಚಿದ್ದ ವಿದ್ಯಾರ್ಥಿಗಳನ್ನು ಸರಕು ಸಾಗಣೆ ವಾಹನದಲ್ಲಿ ಕರೆದೊಯ್ಯಲಾಗಿತ್ತು. ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇದ್ದ ಕಾರಣಕ್ಕೆ ಎರಡು ಬಾರಿ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗಿತ್ತು. ಸಂಜೆ ಮರಳುವಾಗ ಒಂದು ಟ್ರಿಪ್ ವಿದ್ಯಾರ್ಥಿಗಳನ್ನು ಊರಿಗೆ ಬಿಟ್ಟು, ಮತ್ತೊಂದು ಟ್ರಿಪ್ನಲ್ಲಿ 27 ವಿದ್ಯಾರ್ಥಿಗಳನ್ನು ತುಂಬಿಕೊಂಡು ಬರುವಾಗ ಚಿಕ್ಕಸಾಗ್ಗೆರೆ ಬಳಿಯ ಗೌಡನಕುಂಟೆ ಹತ್ತಿರ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ.

ನಾಲ್ಕು ವಿದ್ಯಾರ್ಥಿಗಳಿಗೆ ತಲೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಉಳಿದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಿಇಒ ಸಿ.ವಿ.ನಟರಾಜು ಪ್ರತಿಕ್ರಿಯಿಸಿ, ಶೈಕ್ಷಣಿಕ ಪ್ರವಾಸವನ್ನು ಡಿಸೆಂಬರ್ 31ರೊಳಗೆ ಹೋಗಲು ಬಿಇಒ ಕಡೆಯಿಂದಲೇ ಅಗತ್ಯ ನಿಬಂಧನೆಗಳನ್ನು ಹಾಕಿ ಇಲಾಖೆಯಿಂದ ಅನುಮತಿ ನೀಡುತ್ತೇವೆ. ಇದು ಶೈಕ್ಷಣಿಕ ಪ್ರವಾಸ ಅಲ್ಲ. ಕೆಲವೊಮ್ಮೆ ಅನುಭವಾತ್ಮಕ ಕಲಿಕೆ ದೃಷ್ಟಿಯಿಂದ ಸ್ಥಳೀಯ ಎಸ್ಡಿಎಂಸಿ ಅನುಮತಿ ಪಡೆದು ಹೊರ ಸಂಚಾರ ಹೋಗಲು ಅವಕಾಶ ಇದೆ. ಆ ವೇಳೆ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಆದರೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಅಲ್ಲಿನ ಶಿಕ್ಷಕರು ವಿದ್ಯಾರ್ಥಿಗಳನ್ನು ಹೊರ ಸಂಚಾರಕ್ಕೆ ಕರೆದುಕೊಂಡು ಹೋದ ಬಗ್ಗೆ ಮುಂಚಿತವಾಗಿ ಮಾಹಿತಿ ಇರಲಿಲ್ಲ. ಈಗಾಗಲೇ ಸಂಬಂಧಪಟ್ಟ ಶಿಕ್ಷಕರಿಗೆ ನೋಟಿಸ್ ಜಾರಿಗೆ ಕ್ರಮ ವಹಿಸಲಾಗಿದೆ. ಪ್ರಾಥಮಿಕ ತನಿಖೆ ಕೈಗೊಂಡು, ಸಂಪೂರ್ಣ ಮಾಹಿತಿ ಪಡೆದು ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಶಿಸ್ತು ಕ್ರಮಕ್ಕೆ ಸೂಚನೆ ವಿದ್ಯಾರ್ಥಿಗಳು ತುಂಬಿದ್ದ ವಾಹನ ಅಪಘಾತಕ್ಕೀಡಾದ ಕೆಲವೇ ಕಿ.ಮೀ ದೂರದಲ್ಲಿ ಕರ್ತವ್ಯ ನಿಮಿತ್ತ ಹೋಗಿದ್ದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಆಂಬುಲೆನ್ಸ್ ಕರೆಸಿ ಸ್ಥಳೀಯರ ಸಹಕಾರದಿಂದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಈ ವೇಳೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಮಾಡಿಸಿರಲಿಲ್ಲ ಎಂಬ ಅಂಶ ನನ್ನ ಗಮನಕ್ಕೆ ಬಂದು ತಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲಾಯಿತು. ನಾಲ್ಕು ವಿದ್ಯಾರ್ಥಿಗಳಿಗೆ ಪೆಟ್ಟಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯ ಆಗಿದ್ದು ಎಲ್ಲರೂ ಅಪಯಾದಿಂದ ಪಾರಾಗಿದ್ದಾರೆ. ವಿದ್ಯಾರ್ಥಿಗಳನ್ನು ಕುರಿಗಳಂತೆ ಸರಕು ವಾಹನದಲ್ಲಿ ತುಂಬಿಕೊಂಡು ಬಂದಿದ್ದು ಕಾನೂನು ಉಲ್ಲಂಘನೆಯಾಗಿದೆ. ಕೂಡಲೇ ಸಂಬಂಧ ಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಬಿಇಒ ಅವರಿಗೆ ಸೂಚಿಸಲಾಗಿದೆ. ಕೆ.ಮಂಜುನಾಥ ತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.