ಗುರುವಾರ , ಜೂನ್ 17, 2021
23 °C

ವಿವಿಧೆಡೆ ಅಪಘಾತ; ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾವಗಡ: ತಾಲ್ಲೂಕಿನಲ್ಲಿ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಮಂಗಳವಾಡ ಬಳಿ ಸೋಮವಾರ ಜೆಸಿಬಿ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ವಿ.ಎಚ್.ಪಾಳ್ಯದ ನಾಗರಾಜು (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೈಕ್‌ ಸವಾರ ಮಂಗಳವಾಡದಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಜೆಸಿಬಿ ಡಿಕ್ಕಿ ಹೊಡೆದಿದೆ.  ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ನಿಂದ ಬಿದ್ದು ಸಾವು: ತಾಲ್ಲೂಕಿನ ಕೃಷ್ಣಗಿರಿ ಗೇಟ್ ಬಳಿ ಸೋಮವಾರ ರಾತ್ರಿ ತಾಲ್ಲೂಕಿನ ನಾಗಲಮಡಿಕೆ ಗ್ರಾಮದ ಚಿನ್ನಯ್ಯ (40) ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ.

ಪಟ್ಟಣದಿಂದ ಸಿ.ಕೆ.ಪುರ ಕಡೆ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ತಲೆಗೆ ಪೆಟ್ಟಾಗಿ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಮುಖಾಮುಖಿ ಡಿಕ್ಕಿ: ವೈ.ಎನ್.ಹೊಸಕೋಟೆ: ಹೋಬಳಿಯ ಇಂದ್ರಬೆಟ್ಟ ಗೇಟ್ ಬಳಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಂಧ್ರಪ್ರದೇಶದ ಜಗರೆಡ್ಡಿಹಳ್ಳಿ ನಿವಾಸಿ ರಾಜು (21) ಮೃತಪಟ್ಟಿದ್ದಾರೆ.

ಹೊಸದುರ್ಗ ಗ್ರಾಮದ ದ್ವಿಚಕ್ರ ವಾಹನ ಸವಾರರು ದೊಡ್ಡಹಳ್ಳಿ ಕಡೆಯಿಂದ ಬರುತ್ತಿದ್ದ ವೇಳೆ ಡಿಕ್ಕಿ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ರಾಜು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಎರಡೂ ಬೈಕ್‌ಗಳಲ್ಲಿ ತಲಾ ಮೂವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಉಳಿದ ಐವರ ಸ್ಥಿತಿ ಗಂಭೀರವಾಗಿದೆ. ವೈ.ಎನ್.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.