ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ | ಅಪಘಾತ: ಬೈಕ್‌ನಲ್ಲಿದ್ದ ಇಬ್ಬರು ಸಾವು

Published 14 ಡಿಸೆಂಬರ್ 2023, 9:11 IST
Last Updated 14 ಡಿಸೆಂಬರ್ 2023, 9:11 IST
ಅಕ್ಷರ ಗಾತ್ರ

ಶಿರಾ: ರಾಷ್ಟ್ರೀಯ ಹೆದ್ದಾರಿ-48ರ ಸೀಬಿ ಗ್ರಾಮದ ಸಮೀಪ ಗುರುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಜೋಗಿಹಳ್ಳಿ ಗ್ರಾಮದ ಶ್ರೀಧರ್ (30) ಮತ್ತು ಮುನಿರಾಜು (28) ಮೃತರು.

ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಇದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT