ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲೆ ಆರೋಪಿಗಳು ತುಮಕೂರು ಜೈಲಿಗೆ ಸ್ಥಳಾಂತರ

Published 27 ಜೂನ್ 2024, 4:24 IST
Last Updated 27 ಜೂನ್ 2024, 4:24 IST
ಅಕ್ಷರ ಗಾತ್ರ

ತುಮಕೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ನಗರದ ಹೊರ ವಲಯದ ಊರುಕೆರೆ ಬಳಿಯ ಕಾರಾಗೃಹಕ್ಕೆ ಬುಧವಾರ ಕರೆ ತರಲಾಯಿತು.

ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ಕುರುಬರಹಟ್ಟಿ ಗ್ರಾಮದ ಆರೋಪಿ (ಎ–8) ರವಿಶಂಕರ್‌, ಬೆಂಗಳೂರಿನ ಗಿರಿನಗರದ ನಿವಾಸಿ ಕಾರ್ತಿಕ್ ಅಲಿಯಾಸ್ ಕಪ್ಪೆ (ಎ–15), ಗಿರಿನಗರದ ಹೀರಣ್ಣಗುಡ್ಡದ ವಾಸಿ ಕೇಶವಮೂರ್ತಿ (ಎ–16), ಬನ್ನೇರುಘಟ್ಟ ಮುಖ್ಯರಸ್ತೆಯ ಕೆಂಬತ್ತಹಳ್ಳಿಯ ನಿಖಿಲ್‌ ನಾಯಕ್ (ಎ–17) ಅವರನ್ನು ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.

ಭದ್ರತೆಯ ದೃಷ್ಟಿಯಿಂದ ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ಕರೆತರಲಾಯಿತು. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT