ಶನಿವಾರ, ಮೇ 21, 2022
26 °C
ಎಸ್‍ಸಿಪಿ, ಟಿಎಸ್‍ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಅನುದಾನ ಬಳಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಕೇಂದ್ರ ಮತ್ತು ರಾಜ್ಯ ಹಾಗೂ ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಘಟಕದ ಅಡಿ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಪೂರ್ಣ ಬಳಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಟ ಜಾತಿ ಉಪಯೋಜನೆ/ಬುಡಕಟ್ಟು ಉಪಯೋಜನೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ನಿಗದಿತ ಸಮಯಕ್ಕೆ ಕ್ರಿಯಾ ಯೋಜನೆ ತಯಾರಿಸದೆ ಅಥವಾ ಕಾಲಮಿತಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳದೇ ಅನುದಾನ ಬಾಕಿ ಉಳಿಸಿದರೆ ಆಯಾ ಇಲಾಖೆ ಅಧಿಕಾರಿಗಳೇ ಹೊಣೆಗಾರರಾಗಿರುತ್ತಾರೆ. ಈ ಯೋಜನೆಗಳಲ್ಲಿ ಶೇ 100ರಷ್ಟು ಪ್ರಗತಿಯನ್ನು ಫೆಬ್ರುವರಿ ತಿಂಗಳ ಅಂತ್ಯಕ್ಕೆ ಎಲ್ಲ ಇಲಾಖೆಗಳು ಸಾಧಿಸಲೇಬೇಕು. ಇಲ್ಲದಿದ್ದಲ್ಲಿ ಅಂಥ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.

‘ಪ್ರತಿ ಇಲಾಖೆಗೆ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಕ್ರಿಯಾ ಯೋಜನೆ ರೂಪಿಸಿ, ಸಂಬಂಧಪಟ್ಟ ಇಲಾಖೆ ಅಥವಾ ಅಧಿಕಾರಿಗಳಿಂದ ಅನುಮೋದನೆ ಪಡೆದುಕೊಳ್ಳಬೇಕು’ ಎಂದರು.

‘ಎಸ್‍ಸಿಪಿ/ ಟಿಎಸ್‍ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನ ಹಾಗೂ ಆ ಅನುದಾನವನ್ನು ಯಾವ ಉದ್ದೇಶಗಳಿಗೆ ವೆಚ್ಚ ಮಾಡಲಾಗಿದೆ ಎಂಬುವುದರ ಬಗ್ಗೆ ಪ್ರತಿ ತಿಂಗಳು ಸಮಾಜ ಕಲ್ಯಾಣ ಇಲಾಖೆಗೆ ವರದಿ ಸಲ್ಲಿಸಬೇಕು’ ಎಂದು
ಸೂಚಿಸಿದರು.

‘ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಗಂಗಾ ಕಲ್ಯಾಣ ಯೋಜನೆಯಡಿ ಕೃಷಿಕರಿಗೆ ಕೊಳವೆಬಾವಿ ಸೌಲಭ್ಯ ತ್ವರಿತವಾಗಿ ನೀಡಿ, ಅಗತ್ಯ ವಿದ್ಯುತ್ ಸೌಲಭ್ಯ ನೀಡಬೇಕು’ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ಅಧಿಕಾರಿ ಬಕ್ಕಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಭಾಕರ ಕವಿತಾಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು