ಶುಕ್ರವಾರ, ಮೇ 20, 2022
24 °C

ಕೊಡಿಗೇನಹಳ್ಳಿ: ಹಳ್ಳಿಗಳಲ್ಲೂ ಕಾರ್ಯಕರ್ತರ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಡಿಗೇನಹಳ್ಳಿ: ಕಾಂಗ್ರೆಸ್ ಅಭ್ಯರ್ಥಿ ಆರ್. ರಾಜೇಂದ್ರ ರಾಜಣ್ಣ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಶೀಲರಾದ ಹಿನ್ನೆಲೆಯಲ್ಲಿ ಕೊಡಿಗೇನಹಳ್ಳಿ ಪಟ್ಟಣ ಹಾಗೂ ಹೋಬಳಿಯ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂದ ವಿಜಯಮಾಲೆ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಜನರಲ್ಲಿ ಮನೆ ಮಾಡಿತ್ತು. ಹಾಗಾಗಿ, ಮಂಗಳವಾರ ಫಲಿತಾಂಶ ಪ್ರಕಟವಾಗಲಿದ್ದರಿಂದ ಆಯಾ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ಬೆಳಿಗ್ಗೆಯಿಂದಲೇ ಪಟಾಕಿ, ಸಿಹಿ ತಿನಿಸು ಮತ್ತು ಹೂವಿನ ಹಾರಗಳನ್ನು ತಂದಿಟ್ಟುಕೊಂಡು ಸಿದ್ಧತೆ ಮಾಡಿಕೊಂಡಿದ್ದರು.

ರಾಜೇಂದ್ರ ಜಯಭೇರಿ ಬಾರಿಸುತ್ತಿದ್ದಂತೆ ಕೊಡಿಗೇನಹಳ್ಳಿ, ಐಡಿಹಳ್ಳಿ ಹಾಗೂ ಪುರವರ ಹೋಬಳಿಯ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು