ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ವಿರುದ್ಧ ಕಾರ್ಯಕರ್ತರ ಪ್ರತಿಭಟನೆ

Published 7 ಮಾರ್ಚ್ 2024, 5:13 IST
Last Updated 7 ಮಾರ್ಚ್ 2024, 5:13 IST
ಅಕ್ಷರ ಗಾತ್ರ

ಮಧುಗಿರಿ: ಬಿಜೆಪಿ ತಾಲ್ಲೂಕು ಹಾಗೂ ಜಿಲ್ಲಾ ಘಟಕಗಳ ಪದಾಧಿಕಾರಿಗಳ ಆಯ್ಕೆಯಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳದೆ, ಏಕಪಕ್ಷೀಯ ನಿರ್ಣಯ ಕೈಗೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಮಧುಗಿರಿ, ಕೊರಟಗೆರೆ, ಪಾವಗಡ ಹಾಗೂ ಶಿರಾ ತಾಲ್ಲೂಕಿನ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ಏಕಾಏಕಿ ಮಧುಗಿರಿ ಜಿಲ್ಲಾಧ್ಯಕ್ಷರನ್ನಾಗಿ ಹನುಮಂತೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷರಾದ ಮೇಲೆ ಅವರು ಕೂಡ ಆಯಾ ತಾಲ್ಲೂಕಿನ ಬಿಜೆಪಿ ಮುಖಂಡರ ಮತ್ತು ಕಾರ್ಯಕರ್ತರ ಸಭೆ ಕರೆಯದೆ, ಅಭಿಪ್ರಾಯ ಪಡೆಯದೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ದೂರಿದರು.

ಪಕ್ಷದ ಹಿತದೃಷ್ಟಿಯಿಂದ ತಕ್ಷಣ ರಾಜ್ಯ ಘಟಕದ ಅಧ್ಯಕ್ಷ ಮಧ್ಯೆ ಪ್ರವೇಶಿಸಿ ಅವರನ್ನು ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.

ಪ್ರಸನ್ನ ಕುಮಾರ್, ರುದ್ರೇಶ್, ಚಿತ್ತಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT