ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಿ

Last Updated 30 ಜೂನ್ 2020, 9:36 IST
ಅಕ್ಷರ ಗಾತ್ರ

ಗುಬ್ಬಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚುತ್ತಿದ್ದು, ಈಗಾಲೇ ಸಂಕಷ್ಟದಲ್ಲಿರುವ ಜನರನ್ನು ಕೇಂದ್ರ ಸರ್ಕಾರ ಮತ್ತಷ್ಟು ಶೋಷಣೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿ ಜನಸಾಮಾನ್ಯರನ್ನು ಕಾಪಾಡಬೇಕು ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಒತ್ತಾಯಿಸಿದರು.

ಕಾಂಗ್ರೆಸ್ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರ ಜನ ಸಾಮಾನ್ಯರಿಗೆ ಹೊರೆ ಮಾಡುತ್ತಿದೆ. ಪ್ರಶ್ನಿಸಲು ಮುಂದಾದರೆ ದೇಶ ವಿರೋಧಿ ಪಟ್ಟ ಕಟ್ಟುತ್ತಾರೆ. ಹಲವು ಬಾರಿ ಪತ್ರ ಬರೆದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ವೀಕ್ಷಕ ರೇವಣ್ಣಸಿದ್ದಯ್ಯ, ಕೆ.ಆರ್.ತತಾಯ್ಯ, ನರಸಿಹಯ್ಯ, ಜಿ.ವಿ.ಮಂಜುನಾಥ, ಭರತ್ ಗೌಡ, ಸಲಿಂ ಪಾಷಾ, ರಫಿಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT