ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವ್ಯಸನಿಗಳಲ್ಲಿ ಹದಿಹರೆಯದವರೇ ಹೆಚ್ಚು

ಮಾದಕ ವಸ್ತು ದುರ್ಬಳಕೆ ಹಾಗೂ ಅಕ್ರಮ ಸಾಗಾಟ ವಿರುದ್ಧ ಆಯೋಜಿಸಿದ್ಧ ಅಂತರರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶರ ಹೇಳಿಕೆ
Last Updated 26 ಜೂನ್ 2019, 18:26 IST
ಅಕ್ಷರ ಗಾತ್ರ

ತುಮಕೂರು: ’ಮಾದಕ ದ್ಯವಗಳನ್ನು ಸೇವಿಸಿ ವ್ಯಸನಿಗಳಾಗುತ್ತಿರುವವರಲ್ಲಿ ಹದಿ ಹರೆಯದವರೇ ಹೆಚ್ಚಾಗಿರುವುದು ಆತಂಕಕಾರಿ ವಿಷಯವಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಚರ್ಡ್ ಮದ್ಯವರ್ಜನ ಹಾಗೂ ಸಮಗ್ರ ಪುನರ್ವಸತಿ ಕೇಂದ್ರಗಳ ಆಶ್ರಯದಲ್ಲಿ ನಗರದ ಅಚರ್ಡ್ ಕೇಂದ್ರದಲ್ಲಿ ಆಯೋಜಿಸಿದ್ದ ‘ಮಾದಕ ವಸ್ತುಗಳ ದುರ್ಬಳಕೆ ಹಾಗೂ ಅಕ್ರಮ ಸಾಗಾಟದ ವಿರುದ್ಧ ಅಂತರರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಹದಿ ಹರೆಯದ ಮಕ್ಕಳು ಮಾದಕ ದ್ರವ್ಯ ಸೇವನೆಗೆ ಬಲಿಯಾದರೆ, ಅವರ ಆರೋಗ್ಯ ಹಾಳಾಗುವುದಲ್ಲದೆ ಕುಟುಂಬ ವರ್ಗದವರು ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಒಮ್ಮೆ ಮಾದಕ ವ್ಯಸನಿಗಳಾದವರನ್ನು ವ್ಯಸನಮುಕ್ತರನ್ನಾಗಿಸುವುದು ಬಹಳ ಕಷ್ಟ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಚಲನವಲನದ ಮೇಲೆ ನಿಗಾ ಇಟ್ಟಿರಬೇಕು’ ಎಂದರು.

‘ಪೋಷಕರ ಪ್ರೀತಿಯಿಂದ ವಂಚಿತರಾದವರು, ಮಾನಸಿಕ ಒತ್ತೊಡಕ್ಕೊಳಗಾದವರು ಕ್ಷಣಿಕ ಸುಖಕ್ಕಾಗಿ ಭವ್ಯ ಭಾರತವನ್ನು ಕಟ್ಟುವಂತಹ ಯುವ ಜನಾಂಗವೇ ಮಾದಕ ವ್ಯಸನಿಗಳಾಗುತ್ತಿದ್ದಾರೆ. ವ್ಯಸನರಾದ ಮಕ್ಕಳನ್ನು ಹೆದರಿಸಿ ಬೆದರಿಸಿ ಸರಿದಾರಿಗೆ ತರಲಾಗುವುದಿಲ್ಲ. ಪ್ರೀತಿ,ವಿಶ್ವಾಸದಿಂದ ಅವರ ಮನವೊಲಿಸಿ ತಿಳಿಹೇಳಬೇಕು. ಮಾದಕ ವಸ್ತುಗಳ ಮಾರಾಟದ ಬಗ್ಗೆ ಸುಳಿವು ಸಿಕ್ಕಿದವರು ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಮಾತನಾಡಿ, ‘ವಿಶ್ವ ಸಂಸ್ಥೆಯು 1987ರಿಂದ ಈ ದಿನವನ್ನು ಆಚರಿಸಲು ಘೋಷಿಸಿದ್ದು, ಈ ವರ್ಷ ಆರೋಗ್ಯಕ್ಕಾಗಿ ನ್ಯಾಯ-ನ್ಯಾಯಕ್ಕಾಗಿ ಆರೋಗ್ಯ ಎಂಬ ಘೋಷಾವಾಕ್ಯದೊಂದಿಗೆ ಆಚರಿಸಲಾಗುತ್ತಿದೆ’ ಎಂದರು.

‘ಮಾದಕ ವಸ್ತುಗಳ ದುರ್ಬಳಕೆ ಹಾಗೂ ಅಕ್ರಮ ಸಾಗಾಟದ ವಿರುದ್ಧ ದನಿ ಎತ್ತುವುದು ಯಾವುದೇ ಒಂದು ಇಲಾಖೆ ಜವಾಬ್ದಾರಿಯಲ್ಲ. ಸಾರ್ವಜನಿಕರು, ಅಧಿಕಾರಿಗಳು, ಪೋಷಕರು ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣ ಮತ್ತು ಮಾನಸಿಕ ರೋಗ ನಿವಾರಣಾಧಿಕಾರಿ ಡಾ.ಚೇತನ್ ಮಾತನಾಡಿ, ‘ಮಾದಕ ವಸ್ತುಗಳ ಅಕ್ರಮ ಮಾರಾಟದ ಜಾಲ ನಗರದಲ್ಲಿ ಮಾತ್ರ ಹರಡಿದ್ದು, ವ್ಯಸನಿಗಳ ಸಂಖ್ಯೆ ಹೆಚ್ಚಾದಂತೆ ಮುಂದಿನ ದಿನಗಳಲ್ಲಿ ತಾಲ್ಲೂಕು ಕೇಂದ್ರಗಳಲ್ಲಿಯೂ ತನ್ನ ಜಾಲವನ್ನು ಹರಡುವ ಸಾಧ್ಯತೆ ಇದೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರೇಮ್‌ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯ ಡಾ.ಶರತ್ ವಿಶ್ವರಾಜ್ ಮಾತನಾಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಕೆ.ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು, ಜಿಲ್ಲಾ ಹಿರಿಯ ನಾಗರಿಕರ ಮತ್ತು ಅಂಗವಿಕಲರ ಕಲ್ಯಾಣಾಧಿಕಾರಿ ರಮೇಶ್, ಅಚರ್ಡ್ ಸಂಸ್ಥೆಯ ನಿರ್ವಾಹಕ ನಿರ್ದೇಶಕ ಡಾ. ಹೆಚ್.ಜಿ.ಸದಾಶಿವಯ್ಯ, ಕಾರ್ಯದರ್ಶಿ ಮಾಲಾ ಸದಾಶಿವಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT