ಶುಕ್ರವಾರ, ಅಕ್ಟೋಬರ್ 22, 2021
21 °C

ಕಲೆ, ಸಂಸ್ಕೃತಿ ಬೆಳೆಸಲು ಕಲಾ ರಂಗದ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ‘ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಯೊಬ್ಬ ನಾಗರಿಕರು ಉಳಿಸಿ ಬೆಳೆಸಬೇಕು’ ಎಂದು ಕಲಾ ರಂಗದ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಅರಳಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ ಗ್ರಾಮೀಣ ಜನಪದ ಯುವ ಕಲಾವೃಂದದ ಆಶ್ರಯದಲ್ಲಿ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನೆನಪಿಗಾಗಿ ಆಯೋಜಿಸಿದ್ದ ಸ್ವರ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ಟಿ. ಗೋವಿಂದ ರಾಜು ಮಾತನಾಡಿದರು. ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರಮಣಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಕಲ್ಪನಾ ಗೋವಿಂದರಾಜು ಮಾತನಾಡಿದರು. ಚಾಮುಂಡೇಶ್ವರಿ ಗ್ರಾಮೀಣ ಜನಪದ ಕಲಾವೃಂದದ ಅಧ್ಯಕ್ಷ ಅರಳಾಪುರ ರಾಮಚಂದ್ರಪ್ಪ, ಗಾಯಕರಾದ ಮುನಿರಾಜು, ಮನೋಹರ ಮುರಳಿ, ಮೋನಿಕಾ, ಸಿದ್ದರಾಜು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು