ಮಂಗಳವಾರ, ಜೂನ್ 28, 2022
20 °C

ನಿತ್ಯ 6 ಸಾವಿರ ಪರೀಕ್ಷೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೋವಿಡ್-19 ಪ್ರಕರಣಗಳು ಹೆಚ್ಚದಂತೆ ನಿಯಂತ್ರಿಸಲು ನಿತ್ಯ 6 ಸಾವಿರ ಮಂದಿಗೆ ಪರೀಕ್ಷೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧು ಸ್ವಾಮಿ ಸೋಮವಾರ ಸೂಚಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ‘ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು’ ಎಂದರು.

ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಭಾವನೆಯಲ್ಲಿ ಕೋವಿಡ್ ಪರೀಕ್ಷೆ ಕಡಿಮೆ ಮಾಡಬಾರದು. ಈ ಹಿಂದಿಗಿಂತಲೂ ಹೆಚ್ಚಾಗಿ ಪರೀಕ್ಷೆ ಮಾಡಬೇಕು. ಇದರಿಂದ ನಿರೀಕ್ಷೆಗೂ ಮೀರಿ ನಿಯಂತ್ರಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದರು.

ಈಗಾಗಲೇ, ಗುರುತಿಸಿರುವ ಕೆಂಪು ವಲಯ ಮತ್ತು ಹಾಟ್‌ಸ್ಪಾಟ್ ಪ್ರದೇಶಗಳಲ್ಲಿನ ಸೋಂಕಿತರ ಕುಟುಂಬಸ್ಥರನ್ನು ಪರೀಕ್ಷೆಗೆ ಒಳಪಡಿಸುವಂತೆ ಡಿಎಚ್‌ಒ ಡಾ.ನಾಗೇಂದ್ರಪ್ಪಗೆ ಸೂಚಿಸಿದರು.

ಶಿರಾ ಆಸ್ಪತ್ರೆಗೆ ಆಮ್ಲಜನಕ ಸಾಂದ್ರಕಗಳ ಅವಶ್ಯಕತೆ ಇರುವ ಬಗ್ಗೆ ಶಾಸಕ ರಾಜೇಶ್ ಗೌಡ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ದಾನಿಗಳು ಆಮ್ಲಜನಕ ಸಾಂದ್ರಕಗಳನ್ನು ನೀಡಿದ್ದು, ಶಿರಾ ಆಸ್ಪತ್ರೆಗೆ ಒದಗಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.

ಶಾಸಕ ಮಸಾಲ ಜಯರಾಂ, ‘ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಣೆಯಾಗುತ್ತಿಲ್ಲ’ ಎಂದು ದೂರಿ ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸ್ವಚ್ಛತಾ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು