ಗುಬ್ಬಿ: ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂವಿಧಾನದಲ್ಲಿ ಅನೇಕ ಕಾನೂನುಗಳನ್ನು ರೂಪಿಸಿಗಿದ್ದರೂ ದೌರ್ಜನ್ಯಗಳು ನಡೆಯುತ್ತಿರುವುದು ದುರಾದೃಷ್ಟಕರ ಎಂದು ನ್ಯಾಯಾಧೀಶೆ ಪೂರ್ಣಿಮಾ ಕೆ. ಯಾದವ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಮಹಿಳೆಯರ ಮೇಲಿನ ದೌರ್ಜನ್ಯ ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಣ್ಣುಮಕ್ಕಳು ಯಾವುದೇ ಭಾವನಾತ್ಮಕತೆಗೆ ಒಳಗಾಗದೆ ಕಾನೂನು ಅರಿವು ಪಡೆದು ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕಿದೆ. ಬಾಲಕಿಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಉದ್ದೇಶದಿಂದಲೇ ಪೋಕ್ಸೊ ಕಾಯ್ದೆ ಜಾರಿಗೊಳಿಸಲಾಗಿದೆ ಎಂದರು.

ವಕೀಲ ರಂಗನಾಥ್ ಮಾತನಾಡಿ, ನಾಗರಿಕತೆ ಬೆಳೆದಂತೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಎಲ್ಲ ದೌರ್ಜನ್ಯಗಳನ್ನು ಖಂಡಿಸುವ ಮನಸ್ಥಿತಿ ರೂಢಿಸಿಕೊಳ್ಳಬೇಕಿದೆ. ಇಲ್ಲವಾದಲ್ಲಿ ಪೈಶಾಚಿಕ ಕೃತ್ಯಗಳು ಹೆಚ್ಚುತ್ತವೆ ಎಂದರು.

ಇತ್ತೀಚಿನ ದಿನಗಳಲ್ಲಿ ಮನೆಯ ಹೊರಗಿನ ಜೊತೆಗೆ ಕುಟುಂಬದಲ್ಲಿಯೂ ದೌರ್ಜನ್ಯಗಳು ಹೆಚ್ಚಾಗುತ್ತಿರುವುದರಿಂದ ಮಕ್ಕಳು ಹಾಗೂ ಮಹಿಳೆಯರು ಭಯದಲ್ಲಿ ಬದುಕುವಂತಾಗಿದೆ. ಆತಂಕದ ಪರಿಸ್ಥಿತಿ ಹೋಗಲಾಡಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುವಂತೆ ಅಸ್ತಿತ್ವದಲ್ಲಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.

ಪ್ರಾಂಶುಪಾಲ ರಮೇಶ್ ಮಾತನಾಡಿ, ಕಾನೂನುಗಳ ಬಗ್ಗೆ ಅರಿವು ಪಡೆದರೆ ದೌರ್ಜನ್ಯದ ವಿರುದ್ಧ ಹೋರಾಡಲು ಸಾಧ್ಯ. ಮಕ್ಕಳು ಶಾಲಾ, ಕಾಲೇಜು ಹಾಗೂ ಮನೆಯ ಸಮೀಪ ಯಾವುದೇ ಅಪರಿಚಿತ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಪೋಷಕರು ಹಾಗೂ ಶಿಕ್ಷಕರಿಗೆ ತಿಳಿಸಬೇಕು ಎಂದರು.

ವಕೀಲರ ಸಂಘದ ಉಪಾಧ್ಯಕ್ಷ ಶಿವಯೋಗಿಶ್, ಖಜಾಂಚಿ ಶಿವಾನಂದ್, ವಕೀಲ ನಿರಂಜನ್ ಮೂರ್ತಿ, ಶಿಕ್ಷಕರು, ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.