ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಜಿಲ್ಲೆಯಲ್ಲಿ ಏಡ್ಸ್ ಪ್ರಮಾಣ ಇಳಿಕೆ

Last Updated 2 ಡಿಸೆಂಬರ್ 2021, 5:01 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಿಂದ ಈಚೆಗೆ ಏಡ್ಸ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಶೇ 0.8ರಿಂದ 0.4ಕ್ಕೆ ತಗ್ಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಚ್‍ಐವಿ ಸೋಂಕಿತ ಗರ್ಭಿಣಿಯಿಂದ ಮಗುವಿಗೆ ತಗುಲುವ ಸೋಂಕಿನ ಪ್ರಮಾಣವನ್ನು ಸೊನ್ನೆಗೆ ತರುವ ಗುರಿ ಹೊಂದಲಾಗಿದೆ. ಏಡ್ಸ್‌ಗೆ ಚಿಕಿತ್ಸೆ, ಲಸಿಕೆಯಾಗಲಿ ಇಲ್ಲ. ಜನಜಾಗೃತಿ ಮೂಲಕ ಸೋಂಕು ಹರಡುವುದನ್ನು ತಡೆಯಬೇಕಾಗಿದೆ. ಇಂತಹ ಜಾಗೃತಿ ಕಾರ್ಯದಿಂದಾಗಿ ಸೋಂಕು ಹರಡುವುದನ್ನು ನಿಯಂತ್ರಿಸಲಾಗುತ್ತಿದ್ದು, ಶೂನ್ಯಕ್ಕೆ ತರುವ ಪ್ರಯತ್ನ ನಡೆದಿದೆ ಎಂದರು.

ಅಸುರಕ್ಷಿತ ಲೈಂಗಿಕ ಕ್ರಿಯೆ, ಸಂಸ್ಕರಿಸದೆ ಸೂಜಿ, ಸಿರೆಂಜ್ ಬಳಸುವುದು, ಸೋಂಕಿತರ ರಕ್ತ ಪಡೆಯುವುದು, ಎಚ್‍ಐವಿ ಸೋಂಕಿತ ತಾಯಿಯಿಂದ ಮಗುವಿಗೆ ಸೋಂಕು ಹರಡುತ್ತದೆ. ಸೋಂಕು ಪರೀಕ್ಷೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಅವಕಾಶವಿದೆ ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್‍ಕುಮಾರ್, ‘ಸೋಂಕಿನ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಲು ಜಾನಪದ ಕಲಾ ತಂಡಗಳ ಮೂಲಕ ಪ್ರಚಾರ, ಕಾಲೇಜುಗಳಲ್ಲಿ ರೆಡ್‍ ರಿಬ್ಬನ್‍ ಕ್ಲಬ್ ಸ್ಥಾಪನೆ, ಜಾಹೀರಾತು, ಗುಂಪು ಸಭೆ, ಕಾರ್ಮಿಕರು, ಆಶಾ ಕಾರ್ಯಕರ್ತರಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 18 ಐಸಿಟಿಸಿ ಕೇಂದ್ರಗಳು, 151 ಪ್ರಾಥಮಿಕ ಆರೋಗ್ಯ ಕೇಂದ್ರ, 16 ಖಾಸಗಿ ಸಹಭಾಗಿತ್ವದಲ್ಲಿ ಐಸಿಟಿಸಿ ಸೇವೆ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ, ತಿಪಟೂರು, ಶಿರಾ ಆಸ್ಪತ್ರೆ, ನಗರದ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಎಆರ್‌ಟಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಐಎಂಎ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಸಂಜಯ್, ಎಸ್‍ಐಟಿ ಪ್ರಾಚಾರ್ಯ ಅರುಣ್‍ಕುಮಾರ್, ದಯಾ ಸ್ಪರ್ಶ ಆಸ್ಪತ್ರೆ ಜಿನೇಶ್ ವರ್ಗಿ ಇತರರು ಉಪಸ್ಥಿತರಿದ್ದರು.

ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ನಗರದ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣ, ಮಾರುಕಟ್ಟೆ ಬಳಿ ಜಾಗೃತಿ ಕೇಂದ್ರ ಸ್ಥಾಪಿಸಲಾಗಿತ್ತು. ಜಾನಪದ ಕಲಾ ತಂಡಗಳ ಪ್ರದರ್ಶನ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT