ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾರಣಿಯ ಬಂಧನಕ್ಕೆ ಎಐಎಂಎಸ್‌ಎಸ್‌ ಆಗ್ರಹ

Published 29 ಏಪ್ರಿಲ್ 2024, 4:42 IST
Last Updated 29 ಏಪ್ರಿಲ್ 2024, 4:42 IST
ಅಕ್ಷರ ಗಾತ್ರ

ತುಮಕೂರು: ಹಾಸನದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರು ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿರುವುದು ಆಘಾತಕಾರಿ ಸಂಗತಿ. ಸರ್ಕಾರ ಈ ಪ್ರಕರಣದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಎಐಎಂಎಸ್‌ಎಸ್‌ ಒತ್ತಾಯಿಸಿದೆ.

ಲೈಂಗಿಕ ದೌರ್ಜನ್ಯ ವೆಸಗಿದ ವಿಡಿಯೊ ಇರುವ ಪೆನ್‌ಡ್ರೈವ್‌ಗಳನ್ನು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಾಡಿದ್ದಾರೆ ಎಂದು ತಿಳಿದು ಬಂದಿದೆ. ಇದು ರಾಜ್ಯದಲ್ಲಿಯೇ ತಲ್ಲಣ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಶೋಭಾ ಶಿವಲಿಂಗಯ್ಯ, ಜಿಲ್ಲಾ ಘಟಕದ ಅಧ್ಯ‌ಕ್ಷೆ ಎಂ.ವಿ.ಕಲ್ಯಾಣಿ ಆಗ್ರಹಿಸಿದ್ದಾರೆ.

ಪ್ರಕರಣದ ಸಂತ್ರಸ್ತರ ರಕ್ಷಣೆ ಹಾಗೂ ಆರೈಕೆಗೆ ಶೀಘ್ರವೇ ಕ್ರಮಕೈಗೊಳ್ಳಬೇಕು. ಕೆಲವು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ ಮಾಹಿತಿಯೂ ಇದೆ. ಸರ್ಕಾರ ಕೂಡಲೇ ಸಂತ್ರಸ್ತ ಮಹಿಳೆಯರಿಗೆ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT