ತುಮಕೂರು: ನೂತನ ಕಾರ್ಮಿಕ ಸಂಹಿತೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ವತಿಯಿಂದ ನಗರದ ಟೌನ್ಹಾಲ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

‘ಕಟ್ಟಡ ಕಾರ್ಮಿಕರ 1996ರ ಮೂಲ ಕಾಯ್ದೆ ಉಳಿಸಬೇಕು. ಕಾರ್ಮಿಕರು ಸ್ಥಿರ ಆದಾಯವಿಲ್ಲದೆ ಮಕ್ಕಳಿಗೆ ಶಿಕ್ಷಣ ನೀಡಲು ಆಗುತ್ತಿಲ್ಲ. ಕೆಲಸ ಹುಡುಕಿಕೊಂಡು ವಲಸೆ ಹೋಗಬೇಕಾದ ಪರಿಸ್ಥಿತಿ ಬಂದಿದೆ’ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಗಿರೀಶ್ ಹೇಳಿದರು.

44 ಕಾರ್ಮಿಕ ಕಾನೂನುಗಳನ್ನು ಮತ್ತೆ ಜಾರಿಗೊಳಿಸಬೇಕು. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ– 1996, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ ಜಾರಿಗೆ ತರಬೇಕು. ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಯೋಜನೆಯಡಿ ನೋಂದಣಿ ಮಾಡಬೇಕು. ₹36 ಸಾವಿರ ಕನಿಷ್ಠ ವೇತನ ನಿಗದಿ ಪಡಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಖಾತರಿ ಪಡಿಸಬೇಕು. ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ನಿರ್ಮಾಣ ವಲಯದ ಮಹಿಳಾ ಕಾರ್ಮಿಕರಿಗೆ ಕಾನೂನಿನ ಪ್ರಕಾರ 6 ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಬೇಕು. ನಿವೇಶನ ವಂಚಿತರಿಗೆ ಭೂಮಿ, ವಸತಿ ಕೊಡಬೇಕು ಎಂದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಚಂದ್ರಶೇಖರ್, ಮುಖಂಡರಾದ ಆರ್.ಗೋವಿಂದರಾಜು, ಹನುಮಂತರಾವ್, ರಂಗಧಾಮಯ್ಯ, ಅಂಜನಪ್ಪ, ದೇವರಾಜ್, ವೆಂಕಟೇಶ್, ನರಸಿಂಹಮೂರ್ತಿ, ನಾಗರಾಜು ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.