ಶಿರಾ: ತಾಲ್ಲೂಕಿನ ಅಜ್ಜಯ್ಯನಪಾಳ್ಯದ ಶಾಲೆಯನ್ನು ಬ್ರಹ್ಮಸಂದ್ರ ಕೆಪಿಎಸ್ ಮ್ಯಾಗ್ನೆಟ್ಗೆ ವಿಲೀನ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು, ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ಸೀಬಿ ಅಗ್ರಹಾರ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿ, ಪಿಡಿಒಗೆ ಮನವಿ ಪತ್ರ ಸಲ್ಲಿಸಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಉಪಾಧ್ಯಕ್ಷೆ ರತ್ನಮ್ಮ ಮಾತನಾಡಿ, ಅಜ್ಜಯ್ಯನಪಾಳ್ಯದ ಸರ್ಕಾರಿ ಶಾಲೆಯನ್ನು ಮುಚ್ಚಿದರೆ 1ನೇ ತರಗತಿಯ 6 ವರ್ಷದ ಮಕ್ಕಳು ಸಹ ದಿನನಿತ್ಯ 4 ಕಿ.ಮೀ ದೂರ ನಡೆದುಕೊಂಡು ರಾಷ್ಟ್ರೀಯ ಹೆದ್ದಾರಿ ದಾಟಿಕೊಂಡು ಬ್ರಹ್ಮಸಂದ್ರ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದರಿಂದ ಮಕ್ಕಳಿಗೆ ತೊಂದರೆಯಾಗಲಿದೆ. ಪೋಷಕರು ದೂರದ ಶಾಲೆಗೆ ಹೆಣ್ಣು ಮಕ್ಕಳನ್ನು ಸೇರಿಸದ ಕಾರಣ ಅವರು ಶಿಕ್ಷಣದಿಂದ ವಂಚಿತರಾಗುವಂತಾಗುತ್ತದೆ ಎಂದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಿರಿ. ನಮ್ಮೂರ ಶಾಲೆ ವಿಲೀನ ಕೈಬಿಡಿ, ನಮ್ಮೂರ ಶಾಲೆಗೆ ಸಮರ್ಪಕ ಸೌಲಭ್ಯ ನೀಡಿ, ಕನ್ನಡ ಮಾಧ್ಯಮವನ್ನು ಉಳಿಸಿ. ಇಂಗ್ಲಿಷ್ ಮಾಧ್ಯಮಕ್ಕಾಗಿ ಪ್ರತ್ಯೇಕ ಶಿಕ್ಷಕರ ನೇಮಕ ಮಾಡಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಗ್ರಾಮ ಸಮಿತಿಯ ಸದಸ್ಯರಾದ ಭವ್ಯ, ವಿಮಲಾ, ಎಸ್ ಡಿಎಂಸಿ ಅಧ್ಯಕ್ಷೆ ಶಶಿಕಲಾ, ನರಸಮ್ಮ ಹಾಗೂ ಪೋಷಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-17-767954013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.