ಶಿರಾ: ನಗರದಲ್ಲಿ ಮಂಗಳವಾರ ಶಾಸಕ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೋಡ್ ಶೋ ನಡೆಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಯಾಚಿಸಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಚೊಂಬು ಪ್ರದರ್ಶಿಸಿದರು.

ಅಂಬೇಡ್ಕರ್ ಉದ್ಯಾನದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಶಾಸಕ ಟಿ.ಬಿ.ಜಯಚಂದ್ರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ರೋಡ್ ಶೋಗೆ ಚಾಲನೆ ನೀಡಿದರು.

ನಗರದ ಪ್ರವಾಸಿ ಮಂದಿರದ ವೃತ್ತದಿಂದ ರೋಡ್ ಶೋ ಪ್ರಾರಂಭಿಸಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಖಾಸಗಿ ಬಸ್ ನಿಲ್ದಾಣದ ಬಳಿ ಮುಕ್ತಾಯ ಮಾಡಲಾಯಿತು.

ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಿಗ್ಗೆ ಶಾಸಕ ಟಿ.ಬಿ.ಜಯಚಂದ್ರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮತಯಾಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.