ಶುಕ್ರವಾರ, ಅಕ್ಟೋಬರ್ 23, 2020
22 °C

ಡೇರಿಯಲ್ಲಿ ಅವ್ಯವಹಾರ ಆರೋಪ: ನಿಬಂಧಕರಿಗೆ ಪತ್ರ ಬರೆದ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಡಿಗೇನಹಳ್ಳಿ: ‘ನನ್ನ ಮೇಲೆ ಒತ್ತಡ ಹೇರಿ ಖಾಲಿ ಚೆಕ್‌ಗಳಿಗೆ ಸಹಿ ಮಾಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಪುರವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶನಿವಾರಪ್ಪ ಅವರು ಸಂಘದ ಕಾರ್ಯದರ್ಶಿ ಕೆ. ರಂಗನಾಥ್ ವಿರುದ್ಧ ಬೆಂಗಳೂರಿನ ಸಹಾಯಕ ಸಂಘಗಳ ನಿಬಂಧಕರು ಮತ್ತು ತುಮಕೂರು ಸಹಕಾರ ಸಂಘಗಳ ಉಪನಿಬಂಧಕರಿಗೆ ದೂರು ನೀಡಿದ್ದಾರೆ.

‘ನಾನು ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಹಾಗೂ ಅವಿದ್ಯಾವಂತ ಎಂಬ ಕಾರಣಕ್ಕೆ ನನಗೆ ಹೆದರಿಸಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಒತ್ತಾಯ ಪೂರ್ವಕವಾಗಿ ಕಾರ್ಯದರ್ಶಿ ಸಹಿ ಮಾಡಿಸಿಕೊಂಡಿದ್ದಾರೆ’ ಎಂದು ದೂರಿದರು.

ಸಂಘದ ನಿರ್ದೇಶಕ ಪಿ.ಡಿ. ಕೃಷ್ಣಪ್ಪ ಅವರು ಕಾರ್ಯನಿರ್ವಹಣೆಗೆ ಸಹಕಾರ ನೀಡುತ್ತಿಲ್ಲ. ಈಗಾಗಲೇ ಹೊಸ ಸಿಬ್ಬಂದಿ ನೇಮಕಕ್ಕೆ ತಯಾರಿ ನಡೆಸಿರುವ ರಂಗನಾಥ್ ಸಹಾಯಕ ಸಿಬ್ಬಂದಿ ಹುದ್ದೆಗೆ ಅವರ ಪತ್ನಿಯನ್ನೇ ನೇಮಿಸಲು ಹೋರಾಟ ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿದ ನನಗೆ ಡೇರಿಯ ಹಣಕಾಸಿನ ವ್ಯವಹಾರದ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದರು.

ಕೋವಿಡ್ ಸಮಯದಲ್ಲಿ ಹಾಲು ಉತ್ಪಾದಕರು ಹಾಗೂ ಸಿಬ್ಬಂದಿಗೆ ಬೋನಸ್ ನೀಡುವಂತೆ ಹೇಳಿದ್ದರೂ ಇದುವರೆಗೆ ಬೋನಸ್ ನೀಡಿಲ್ಲ. ಒತ್ತಡದಲ್ಲಿ ನನ್ನಿಂದ ಸಹಿ ಪಡೆದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯಿಸಿ ಪತ್ರ ಬರೆದಿದ್ದೇನೆ ಎಂದು ಶನಿವಾರಪ್ಪ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು