ಶನಿವಾರ, ಮೇ 28, 2022
31 °C
ತಿಪಟೂರಿನಲ್ಲಿ ಮುಕ್ತಾಯವಾದ ಮೂರು ದಿನಗಳ ಟೂರ್ನಿ

ಕೊಕ್ಕೊ: ಆಳ್ವಾಸ್‌, ಕುರುಬೂರು ತಂಡ ಚಾಂಪಿಯನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು (ತುಮಕೂರು): ಮೂಡುಬಿದಿರೆಯ ಆಳ್ವಾಸ್ ತಂಡ ಹಾಗೂ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಕೆಕೆಎಸ್‌ಸಿ ತಂಡ ರಾಜ್ಯಮಟ್ಟದ ಕೊಕ್ಕೊ ಟೂರ್ನಿಯಲ್ಲಿ ಕ್ರಮವಾಗಿ ಪುರುಷ ಮತ್ತು ಮಹಿಳೆಯರ ವಿಭಾಗದ ಚಾಂಪಿಯನ್‌ ಆಗಿ ಹೊರಹೊಮ್ಮಿವೆ.    

ತಿಪಟೂರಿನಲ್ಲಿ ಮಂಗಳವಾರ ಮುಕ್ತಾಯವಾದ ಮೂರು ದಿನಗಳ ರಾಜ್ಯಮಟ್ಟದ ಕೊಕ್ಕೊ ಟೂರ್ನಿಯ ಪುರುಷರ ವಿಭಾಗದಲ್ಲಿ ಬೆಂಗಳೂರಿನ ವೈಪಿಎಸ್‌ಸಿ (ದ್ವಿತೀಯ), ದಾವಣಗೆರೆಯ ಡಿವೈಇಎಸ್(ತೃತೀಯ) ಮತ್ತು ಭದ್ರಾವತಿಯ ಎಸ್‌ಆರ್‌ಎಂವಿ ತಂಡ ನಾಲ್ಕನೇ ಸ್ಥಾನ ಪಡೆದಿದೆ.

ಮಹಿಳೆಯರ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ (ದ್ವಿತೀಯ), ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿಯ ಕೆಕೆಓ(ತೃತೀಯ) ಮತ್ತು ಮಂಡ್ಯದ ಚಂದಗಾಳು ತಂಡ ನಾಲ್ಕನೇ ಸ್ಥಾನ ಪಡೆದಿದೆ.  ರಾಜ್ಯ ಕೊಕ್ಕೊ ಸಂಸ್ಥೆ ಅಧ್ಯಕ್ಷ ಲೋಕೇಶ್ವರ, ಆಳ್ವಾಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ವಿವೇಕ್ ಆಳ್ವಾ, ಶೀತಲ್ ಲೋಕೇಶ್ವರ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಕುಮಾರ ಆಸ್ಪತ್ರೆಯ ಡಾ.ಶ್ರೀಧರ್, ಇನ್‌ಸ್ಪೆಕ್ಟರ್ ಕಿರಣ್ ಕುಮಾರ್, ಯುವ ಮುಖಂಡ ನಿಖಿಲ್ ರಾಜಣ್ಣ, ಬೆಂಗಳೂರು ವಿ.ವಿಯ ಸುಂದರ್ ರಾಜ್ ಅರಸ್, ಭಾರತೀಯ ಕೊಕ್ಕೊ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹೇಂದರ್ ಸಿಂಗ್ ತ್ಯಾಗಿ, ಕರ್ನಾಟಕ ಕೊಕ್ಕೊ ಸಂಸ್ಥೆಯ ಖಜಾಂಚಿ ವೆಂಕಟರಾಜು, ನಗರಸಭೆ ಅಧ್ಯಕ್ಷ ಪಿ.ಜೆ. ರಾಮಮೋಹನ್, ಉಪಾಧ್ಯಕ್ಷ ಸೊಪ್ಪು ಗಣೇಶ್, ಸದಸ್ಯರಾದ ಸಂಗಮೇಶ್ ಕಳ್ಳಿಹಾಲ್, ಯಮುನಾ ಧರಣೀಶ್, ಎಪಿಎಂಸಿ ನಿರ್ದೇಶಕ ಬಸವರಾಜು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು