ಶುಕ್ರವಾರ, ಜನವರಿ 22, 2021
28 °C
ಮಹಾನಗರಪಾಲಿಕೆ ನಾಮನಿರ್ದೇಶಿತ ಸದಸ್ಯರಿಗೆ ಶಾಸಕರ ಸಲಹೆ

ಜನಪರ ಕೆಲಸಗಳಿಗೆ ಸದಾ ಮನ್ನಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಮಹಾನಗರಪಾಲಿಕೆಗೆ ನಾಮನಿರ್ದೇಶನಗೊಂಡಿರುವ ಸದಸ್ಯರು ತಮ್ಮ ಇತಿಮಿತಿಯೊಳಗೆ ಸಾಧ್ಯವಾದಷ್ಟು ಮಟ್ಟಿಗೆ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಲಹೆ ನೀಡಿದರು.

ನಗರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟವು ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಸವಿಲೇವಾರಿ, ರಾಜ ಕಾಲುವೆಗಳ ಒತ್ತುವರಿ ತೆರವು, ಈ ಹಿಂದೆ ನಡೆದಿರುವ ಖಾತೆಗಳ ಅಕ್ರಮ ಕುರಿತು ಮಾಹಿತಿ ಕಲೆ ಹಾಕಿ ಜನರ ಮುಂದಿಡುವ ಕೆಲಸವನ್ನು ನಾಮನಿರ್ದೇಶಿತ ಸದಸ್ಯರು ಅದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದರು.

ವಿರೋಧ ಪಕ್ಷಗಳ ಸದಸ್ಯರಿಗೆ ಟೀಕಿಸುವ ತಪ್ಪುಗಳನ್ನು ಎತ್ತಿ ಹಿಡಿಯುವ ಅಧಿಕಾರ ಇದೆ. ಆದರೆ ಸರಿಯಾದ ತಿಳಿವಳಿಕೆ ಇಲ್ಲದೆ ದಾಖಲೆ ರಹಿತ ಆರೋಪ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಕೇವಲ ತಪ್ಪು ಕಂಡುಹಿಡಿಯುವುದೇ ಮುಖ್ಯವಲ್ಲ. ಪರಿಹಾರವು ಅಗತ್ಯ ಎಂದು ಹೇಳಿದರು.

ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಳೆದ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳು ಬರದಿಂದ ಸಾಗುತ್ತಿವೆ. ಸರ್ಕಾರಕ್ಕೆ ವಾಪಸ್ ಆಗಿದ್ದ ₹ 125 ಕೋಟಿ ಮತ್ತೆ ವಾಪಸ್ ಬಂದಿದೆ. ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇವುಗಳಲ್ಲಿ ಗುಣಮಟ್ಟ ಕಾಯ್ದುಕೊಂಡರೆ ಹತ್ತಾರು ವರ್ಷ ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ಮಾತನಾಡಿದರು. ಪಾಲಿಕೆ ಸದಸ್ಯೆ ಗಿರಿಜಾ, ಮಲ್ಲಿಕಾರ್ಜುನಯ್ಯ, ಸರೋಜಗೌಡ, ವಿನಯ್ ಜೈನ್, ಕೊಪ್ಪಳ ನಾಗರಾಜು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು