ತುಮಕೂರು: ನಿತ್ಯದ ಬದುಕಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಪ್ರಜ್ಞಾಪೂರ್ವಕ
ವಾಗಿ ದೂರವಾಗಿಸುವುದರೊಂದಿಗೆ ಪರಿಸರ ಸಂರಕ್ಷಿಸಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಂಸದ ಜಿ.ಎಸ್. ಬಸವರಾಜು ಹೇಳಿದರು.

ಪ್ಲಾಸ್ಟಿಕ್ ರಹಿತ ದಿನಾಚರಣೆ ಅಂಗವಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಆಯೋಜಿಸಿದ್ದ ಸ್ವಚ್ಛ ಭಾರತ್ ಮಿಷನ್ ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಕೈಪಿಡಿ ಮತ್ತು ಸ್ಟಿಕ್ಕರ್ಸ್ ಬಿಡುಗಡೆ ಮಾಡಿ ಮಾತನಾಡಿದರು.

ಪರಿಸರ ಸಂರಕ್ಷಣೆ ಕೇವಲ ಆಚರಣೆಗಷ್ಟೆ ಸೀಮಿತಗೊಳಿಸದೆ ನಿತ್ಯ ಬದುಕಿನ ಕಾರ್ಯವಾಗಬೇಕು. ಪರಿಸರವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕು ಎಂದರು.

ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದೇವೆ. ದೇಶದಲ್ಲಿ 135 ಬಿಲಿಯನ್ ಬೆಲೆ ಬಾಳುವ ಔಷಧ ಸೇವನೆ ಮಾಡುತ್ತಿದ್ದೇವೆ. ಇದು ದುರದೃಷ್ಟಕರ ಎಂದರು.

ಹಸಿ ಮತ್ತು ಒಣ ಕಸ ವಿಂಗಡಿಸಿ ವಿಲೇವಾರಿ ಮಾಡಬೇಕು. ಅನೈರ್ಮಲ್ಯಕ್ಕೆ ಎಡೆಮಾಡಿಕೊಡಬಾರದು. ಅವೈಜ್ಞಾನಿಕ
ಕಸ ವಿಲೇವಾರಿಗೆ ಕಡಿವಾಣ ಹಾಕಬೇಕು. ಸರ್ಕಾರ ಜನರ ಶ್ರೇಯೋಭಿವೃದ್ಧಿ ಜೊತೆಗೆ ಸ್ವಚ್ಛತೆಗೂ ಶ್ರಮಿಸುತ್ತಿದೆ. ಸಮಗ್ರ ನೀರಾವರಿ ಯೋಜನೆಯಿಂದಾಗಿ ಜಿಲ್ಲೆಯ ನೀರಿನ ಕೊರತೆ ದೂರವಾಗಲಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ಮೂಲಕ ಗ್ರಾಮದ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಸ್ವಾತಂತ್ರ್ಯದಷ್ಟೇ ಸ್ವಚ್ಛತೆ ಮುಖ್ಯ. ನಾಡಿನ ಅಭಿವೃದ್ಧಿಗೆ ಸ್ವಚ್ಛತೆ ಮೊದಲ ಆದ್ಯತೆಯಾಗಬೇಕು. ಸ್ವಚ್ಛವಾಗಿ
ರುವ ನಾಡು ಅಭಿವೃದ್ಧಿಯಲ್ಲಿಯೂ ಮುಂದಿರುತ್ತದೆ ಎಂದರು.

ಪ್ಲಾಸ್ಟಿಕ್ ಕರಗದ ಮತ್ತು ಕೊಳೆಯದ ವಸ್ತು. ಇದರ ವಿಲೇವಾರಿ ಸುಲಭದ ಕೆಲಸವಲ್ಲ. ಆದ್ದರಿಂದ ವೈಜ್ಞಾನಿಕ ವಿಲೇವಾರಿ ಮಾಡುವ ಬದಲು ಪ್ಲಾಸ್ಟಿಕ್‌ಗೆ ಬೆಂಕಿ ಇಟ್ಟು ವಿಲೇವಾರಿ ಮಾಡುವುದು ಹೆಚ್ಚಾಗುತ್ತಿದೆ. ಇದರಿಂದ ನೀರು, ಪರಿಸರ ಮತ್ತು ವಾತಾವರಣ ಕಲುಷಿತಗೊಳ್ಳುತ್ತಿದೆ. ಪಾಸ್ಟಿಕ್ ಮುಕ್ತ ಭಾರತ ನಿರ್ಮಾಣ ಕೇವಲ ಸರ್ಕಾರದ ನೀತಿಯಿಂದ ಸಾಧ್ಯವಾಗುವುದಿಲ್ಲ. ಇದಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಪಾಸ್ಟಿಕ್ ಬಳಕೆ ಬದುಕಿನ ಭಾಗವಾಗದೆ ಪರ್ಯಾಯ ವ್ಯವಸ್ಥೆಗೆ ಒಗ್ಗಿಕೊಳ್ಳಬೇಕು. ಪ್ರತಿಯೊಬ್ಬರೂ ಒಂದೊಂದು ಗಿಡ ನೆಡುವ ಮೂಲಕ ಪರಿಸರ ಸಂಪತ್ತಿನ ಬೆಳವಣಿಗೆಗೆ ಕೊಡುಗೆಯಾಗಬೇಕು ಎಂದರು.

ಜಿಲ್ಲಾಪಂಚಾಯಿತಿ ಉಪ
ಕಾರ್ಯದರ್ಶಿ ಟಿ.ಕೆ. ರಮೇಶ್ ಮಾತನಾಡಿ, ಒಟ್ಟು 80 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ಘಟಕ ನಿರ್ಮಿಸಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮದ ಮನೆ-ಮನೆಗೂ ನೀರು ಕಲ್ಪಿಸುವ ಯೋಜನೆ ಯಶಸ್ವಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಜಿ ವೈ.ಎಚ್. ಹುಚ್ಚಯ್ಯ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಬಾಲರಾಜು
ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.