‘ಒಕ್ಕೂಟ ಉಳಿಸಿ’ ಆಂದೋಲನದಿಂದ ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಸೆ. 14ರಂದು ರಾಷ್ಟ್ರೀಯ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಒಕ್ಕೂಟ ವ್ಯವಸ್ಥೆ ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ಧ್ವನಿ ಎತ್ತಲು ‘ಒಕ್ಕೂಟ ಉಳಿಸಿ’ ಅಭಿಯಾನ ನಡೆಯುತ್ತಿದೆ. ಬೆಂಗಳೂರಿನ ಕೆ.ಆರ್.ವೃತ್ತದ ಬಳಿಯ ಯುವಿಸಿಇ ಹಾಲ್ ಮುಂಭಾಗದ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ವಹಿಸಿಕೊಳ್ಳಲಿದ್ದಾರೆ’ ಎಂದು ಪ್ರೊ.ಎಸ್.ಜಿ.ಸಿದ್ದರಾಮಯ್ಯ ತಿಳಿಸಿದರು.