ಶುಕ್ರವಾರ, ಫೆಬ್ರವರಿ 26, 2021
30 °C

ಆನಂದಸಿಂಗ್ ರಾಜೀನಾಮೆಗೆ ಕಾರಣ ಗೊತ್ತಿಲ್ಲ: ಸಚಿವ ರಾಜಶೇಖರ್ ಪಾಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಾಸಕ ಆನಂದ ಸಿಂಗ್ ಅವರು ರಾಜೀನಾಮೆ ಯಾಕೆ ಕೊಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅವರು ರಾಜೀನಾಮೆ ಕೊಡುತ್ತಾರೆ. ಇವರು ರಾಜೀನಾಮೆ ಕೊಡುತ್ತಾರೆ ಎಂದು ವಿರೋಧ ಪಕ್ಷದವರು ಹೇಳಿಕೊಂಡು ಬಂದಿದ್ದಾರೆ.  ಮಾಧ್ಯಮಗಳಲ್ಲಿ ರಾಜೀನಾಮೆ ಕೊಡುತ್ತಾರೆ ಎಂಬ ಶಾಸಕರ ಹೆಸರು ಪಟ್ಟಿಯಲ್ಲೂ ಆನಂದ್ ಸಿಂಗ್ ಹೆಸರು ಕೇಳಿರಲಿಲ್ಲ. ಆದರೆ, ಈಗ ಯಾಕೆ ರಾಜೀನಾಮೆ ಕೊಟ್ಟಿದ್ದಾರೆ ಎಂಬುದು ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು