ಗುರುವಾರ , ಆಗಸ್ಟ್ 5, 2021
25 °C

ತುಮಕೂರು: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೊರೊನಾ ಸಂಕಷ್ಟದ ಈ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ರಕ್ಷಣೆ ಒದಗಿಸಬೇಕು. ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಕಮಲ, ‘ಮಕ್ಕಳನ್ನು ತಪಾಸಣೆ ಮತ್ತು ತೂಕ ಮಾಡುವಾಗ ಅಂಗನವಾಡಿ ಕೇಂದ್ರ, ತೂಕದ ಯಂತ್ರಗಳನ್ನು ಸ್ಯಾನಿಟೈಸ್ ಮಾಡಬೇಕು. ಕೊರೊನಾ ವಾರಿಯರ್ಸ್‌ಗಳಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರಿಗೆ ₹ 25 ಸಾವಿರ ಪ್ರೋತ್ಸಾಹಧನ, ಸ್ಥಳೀಯ ಸಾರಿಗೆ ಬಸ್‌ಪಾಸ್, ಊಟದ ವೆಚ್ಚ ಭರಿಸಬೇಕು‘ ಎಂದು ಆಗ್ರಹಿಸಿದರು.

ನಿವೃತ್ತ ಕಾರ್ಯಕರ್ತೆಯರಿಗೆ ನಿವೃತ್ತಿ ಸೌಲಭ್ಯ ಕೊಡಬೇಕು. ಮೇಲ್ವಿಚಾರಕಿಯರ ಹುದ್ದೆಗೆ ನೂರರಷ್ಟು ಮೀಸಲಾತಿ, ಸೇವಾಹಿರಿತನದ ಆಧಾರದಲ್ಲಿ ಅಂಗನವಾಡಿ ನೌಕರರಿಗೆ ಮುಂಬಡ್ತಿ ಕೊಡಬೇಕು ಎಂದರು.

ಮುಖಂಡರಾದ ಗೌರಮ್ಮ ಮಾತನಾಡಿ, ‘ಕೆಲಸ ಕಾಯಂ ಮಾಡಬೇಕು. ಕಾಯಂ ಮಾಡುವವರೆಗೆ ಕಾರ್ಯಕರ್ತೆಯರಿ ₹ 30 ಸಾವಿರ, ಸಹಾಯಕಿಯರಿಗೆ ₹ 21 ಸಾವಿರ ವೇತನ ಕೊಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ, ಯುಕೆಜಿ ಪ್ರಾರಂಭಿಸಬೇಕು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು