ಗುರುವಾರ , ಜುಲೈ 29, 2021
20 °C

ರೋಗನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ರೋಗನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನು ಕ್ಷೇತ್ರದ 60 ಸಾವಿರ ಕುಟುಂಬಗಳಿಗೆ ವಿತರಿಸುವ ಕಾರ್ಯಕ್ಕೆ ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್ ಅಧ್ಯಕ್ಷತೆಯಲ್ಲಿ ಬುಧವಾರ ಚಾಲನೆ ನೀಡಲಾಯಿತು.

ಸುದ್ದಿಗಾರರೊಂದಿಗೆ ಮಾತ ನಾಡಿದ ಡಿ.ಕೆ.ಸುರೇಶ್, ‘ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೊರೊನಾ ತಡೆಗಟ್ಟಲು ಔಷಧಿ ಕಂಡು ಹಿಡಿಯದ ಕಾರಣ, ಜನರೇ ಎಚ್ಚೆತ್ತುಕೊಳ್ಳಬೇಕಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳನ್ನು ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿದ್ದೆ. ಇದುವರೆಗೂ ಮನವಿಗೆ ಸ್ಪಂದಿಸಿಲ್ಲ’ ಎಂದು ಹೇಳಿದರು. 

ಸರ್ಕಾರಗಳು ಗಮನ ಹರಿಸದ ಕಾರಣ, ಶಾಸಕ ಡಾ.ರಂಗನಾಥ್ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ, ಸ್ಥಳೀಯ ಸೆಮಿಲ್ಯಾಬ್ ಕಾರ್ಖಾನೆಯೊಂದಿಗೆ ಚರ್ಚಿಸಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಯಾಲ್ಸಿಯಂ, ವಿಟಮಿನ್ ಸಿ, ಕಬ್ಬಿಣ ಮತ್ತು ಸತುವಿನ ಅಂಶಗಳ 30 ಮಾತ್ರೆಯನ್ನು ವಿತರಿಸಲು ಕಾರ್ಯಕ್ರಮ ರೂಪಿಸಿ, ಚಾಲನೆ ನೀಡಲಾಗಿದೆ. ಅರ್ಹರು ಸದುಪಯೋಗ ಪಡೆದುಕೊಳ್ಳಬಹುದು ಎಂದರು. 

ಶಾಸಕ ಡಾ.ರಂಗನಾಥ್, ಪುರಸಭೆ ಸದಸ್ಯರು, ಕಾಂಗ್ರೆಸ್ ಪದಾಧಿಕಾರಿಗಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.