ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗಮ ಸಂಚಾರ ವ್ಯವಸ್ಥೆಗೆ ಮನವಿ

Last Updated 20 ಸೆಪ್ಟೆಂಬರ್ 2022, 3:14 IST
ಅಕ್ಷರ ಗಾತ್ರ

ಪಾವಗಡ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಹೆಲ್ಪ್ ಸೊಸೈಟಿ ಪದಾಧಿಕಾರಿಗಳು ಸೋಮವಾರ ಪೊಲೀಸ್ ಇನ್‌ಸ್ಪೆಕ್ಟರ್ ಅಜಯ ಸಾರಥಿ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಸಂತೆ ದಿನದಂದು ನಾಗರಕಟ್ಟೆಯಿಂದ ಶನೈಶ್ಚರ ದೇಗುಲದವರೆಗೆ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿದರು.

ಟ್ರಾಫಿಕ್ ಸಮಸ್ಯೆ ಹೆಚ್ಚಿರುವ ರಸ್ತೆಗಳನ್ನು ಗುರುತಿಸಿ ಏಕಮುಖ ಸಂಚಾರ ಹಾಗೂ ಸರಿ, ಬೆಸ ಸಂಖ್ಯೆಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಬಸ್ ನಿಲ್ದಾಣದ ಒಳಹೋಗುವ ಹಾಗೂ ಹೊರಬರುವ ವಾಹನಗಳಿಂದ ದಟ್ಟಣೆ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಪೊಲೀಸ್ ಇನ್‌ಸ್ಪೆಕ್ಟರ್ ಅಜಯ್ ಸಾರಥಿ, ಏಕಮುಖ ಸಂಚಾರಕ್ಕೆ ಜಿಲ್ಲಾಮಟ್ಟದಲ್ಲಿ ಅನುಮೋದನೆ ಪಡೆದು ಕಾರ್ಯಗತಗೊಳಿಸಲಾಗುವುದು. ಇನ್ನುಳಿದ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಶ್ರೀರಾಮಸೇನೆ ಅಧ್ಯಕ್ಷ ಕಾವಲಗೇರಿ ರಾಮಾಂಜಿ, ಆಟೊ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಆಂಬುಲೆನ್ಸ್ ತೇಜ, ರಾಕೇಶ್, ವೆಂಕಟೇಶ್ ನಾಯ್ಕ್, ಕೋನಪ್ಪ, ಶ್ರೀಕಾಂತ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT