ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ಅಂತರರಾಜ್ಯ ಕಳ್ಳರ ಬಂಧನ 

Published 28 ಜನವರಿ 2024, 5:08 IST
Last Updated 28 ಜನವರಿ 2024, 5:08 IST
ಅಕ್ಷರ ಗಾತ್ರ

ತಿಪಟೂರು: ನಗರದ ಕೋಟೆಯಲ್ಲಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಅಂತರರಾಜ್ಯ ಕಳ್ಳರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೋಟೆಯಲ್ಲಿ ರಾತ್ರಿ ಐವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜಗದೀಶ್ ಅಲಿಯಾಸ್ ರಾಮಸಿಂಗ್ (50), ರಾಮ್‌ಪಾಲ್ (38) ಬಂಧಿತರು. ಬಂಧಿತರಿಂದ ಒಂದು ನಾಡ ಪಿಸ್ತೂಲು, ಒಂಬತ್ತು ಜೀವಂತ ಗುಂಡು, ಬೈಕ್‌, ಕಾರದ ಪುಡಿ, ಸುತ್ತಿಗೆ, ಕಬ್ಬಿಣದ ರಾಡ್‌ ವಶಪಡಿಸಿಕೊಳ್ಳಲಾಗಿದೆ.

ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಮೂವರು ಆರೋಪಿಗಳ ಬಂಧನಕ್ಕೆ ತನಿಖೆ ಮುಂದುವರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT