ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಗಳ ಬಂಧನ

Published 27 ಡಿಸೆಂಬರ್ 2023, 8:47 IST
Last Updated 27 ಡಿಸೆಂಬರ್ 2023, 8:47 IST
ಅಕ್ಷರ ಗಾತ್ರ

ತುಮಕೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಮೊಬೈಲ್‌ ಕದ್ದು ಪರಾರಿಯಾಗಿದ್ದ ಚಿಕ್ಕನಾಯಕನಹಳ್ಳಿಯ ಫಾರೀಕ್‌ಪಾಷ (30), ಮೊಹಮದ್ ಸಾಹಿಲ್‌ (20) ಎಂಬುವರನ್ನು ಪೊಲೀಸರು ಬಂಧಿಸಿ, ಮೊಬೈಲ್‌ ವಶಕ್ಕೆ ಪಡೆದಿದ್ದಾರೆ.

ತುರುವೇಕೆರೆ ತಾಲ್ಲೂಕಿನ ಕೆಬ್ಬೆಪಾಳ್ಯ ಗ್ರಾಮದ ಹೊರ ವಲಯದಲ್ಲಿ ನ. 2ರ ಸಂಜೆ ಕಾಲೇಜು ಮುಗಿಸಿಕೊಂಡು ವಾಪಸ್‌ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಹೆದರಿಸಿ ಮೊಬೈಲ್‌ ಕಿತ್ತುಕೊಂಡು ಹೋಗಿದ್ದರು. ಈ ಸಂಬಂಧ ದಂಡಿನಶಿವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಡಿ. 23ರಂದು ಆರೋಪಿಗಳನ್ನು ಬಂಧಿಸಿದ್ದಾರೆ.

ದರೋಡೆ– ಬಂಧನ: ರಸ್ತೆಯಲ್ಲಿ ವಾಹನಗಳನ್ನು ಅಡ್ಡಹಾಕಿ ಚಾಲಕರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ತುರುವೇಕೆರೆ ಪಟ್ಟಣದ ರಾಘವೇಂದ್ರ ನಗರದ ಸುರೇಶ (35) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಾಂಡವಪುರ ತಾಲ್ಲೂಕಿನ ಹಿರೆಮರಳಿ ಗ್ರಾಮದ ಪ್ರಕಾಶ್‌ ಎಂಬುವರು ಡಿ. 20ರಂದು ಪಾಂಡವಪುರದಿಂದ ಬಳ್ಳಾರಿಗೆ ಐಶರ್ ವಾಹನದಲ್ಲಿ ಬೆಲ್ಲದ ಲೋಡ್ ತೆಗೆದುಕೊಂಡು ಹೋಗುತ್ತಿದ್ದರು. ಅಂದು ರಾತ್ರಿ 10 ಗಂಟೆಗೆ ತುರುವೇಕೆರೆಯ ಮುನಿಯೂರು ಗೇಟ್ ಸಮೀಪ ಮೂವರು ಅಪರಿಚಿತರು ರಸ್ತೆಗೆ ಅಡ್ಡಲಾಗಿ ಆಟೊ ನಿಲ್ಲಿಸಿ, ₹50 ಸಾವಿರ ಬೆಲೆ ಬಾಳುವ ಮೊಬೈಲ್‌, ₹100 ಹಣ ದರೋಡೆ ಮಾಡಿದ್ದರು. ಈ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ 5 ಬೈಕ್‌ ಮತ್ತು 6 ಮೊಬೈಲ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಎರಡು ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಕುಣಿಗಲ್ ಉಪವಿಭಾಗ ಡಿವೈಎಸ್‌ಪಿ ಲಕ್ಷ್ಮಿಕಾಂತ್‌ ನೇತೃತ್ವದಲ್ಲಿ ತುರುವೇಕೆರೆ ವೃತ್ತದ ಸಿಪಿಐ ಬಿ.ಎನ್‌.ಲೋಹಿತ್ ಅವರ ತಂಡ ಕಾರ್ಯಾಚರಣೆ ನಡೆಸಿತ್ತು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT